ಸುನೀಲ್ ಕುಮಾರ್ 
ರಾಜ್ಯ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ: ಶರಣಾಗತಿ ಪ್ಯಾಕೇಜ್ ಗೆ ಸುನೀಲ್ ಕುಮಾರ್ ಆಕ್ಷೇಪ

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್‌ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!