ಸಿಎಂ ಸಿದ್ದರಾಮಯ್ಯ 
ರಾಜ್ಯ

ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ

ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ.

ಬೆಂಗಳೂರು: ತಾಯಂದಿರ ಮರಣ ತಡೆಗೆ ತಮ್ಮ ಸರ್ಕಾರ ಶೀಘ್ರದಲ್ಲೇ ಕೇಂದ್ರೀಕೃತ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.

ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018-20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 6,593 ಕೋಟಿ ರೂ.ವೆಚ್ಚ ಮಾಡಲಾಗಿದೆ. ನಿಧಿ ಬಳಕೆಯಲ್ಲಿ ಶೇ.58.96ರಷ್ಟು ಪ್ರಗತಿ ಸಾಧಿಸಲಾಗಿದೆ, ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಹೆರಿಗೆ ಪ್ರಮಾಣ ಕಡಿಮೆ ಇರುವ ಆಸ್ಪತ್ರೆಗಳ ವೈದ್ಯರನ್ನು ಅಗತ್ಯ ಇರುವ ಕಡೆ ನಿಯೋಜಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಂಬಂಧಪಟ್ಟ ಇಲಾಖೆಗಳ ನಡುವೆ ಉತ್ತಮ ಸಮನ್ವಯತೆಯೊಂದಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಔಷಧ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಪ್ಯಾಕೇಜ್‌ಗಳ ಪರಿಶೀಲನೆ ನಡೆಸಲಾಗುವುದು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಪರಿಚಯಿಸಲಾಗುವುದು.

ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಮ್ಮ ಕ್ಲಿನಿಕ್‌ಗಳನ್ನು ಬಲಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ದೊರೆತರೆ ಮಾತ್ರ ಖಾಸಗಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಕಡಿಮೆ ಮಾಡಬಹುದು ಎಂದರು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯ ಪ್ಯಾಕೇಜ್‌ಗಳ ಪರಿಶೀಲನೆ ನಡೆಸಲಾಗುವುದು.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 3,927 ಎಎನ್‌ಎಂ ಹುದ್ದೆಗಳಲ್ಲಿ 1,205 ಹಾಗೂ 2,990 ಎಚ್‌ಐಒ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಅಗತ್ಯ ಸೇವಾ ವಿಭಾಗಗಳಲ್ಲಿನ ಖಾಲಿ ಹುದ್ದೆಗಳನ್ನು ಯಾವುದೇ ವಿಳಂಬವಿಲ್ಲದೆ ಭರ್ತಿ ಮಾಡಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT