ಸಂಗ್ರಹ ಚಿತ್ರ 
ರಾಜ್ಯ

Mandya ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಎರಡು ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ.

ಬೆಂಗಳೂರು: ಮಂಡ್ಯದ ಕಬ್ಬು ಬೆಳೆಗಾರರ ​​ಹೆಚ್ಚುವರಿ ವಿದ್ಯುತ್ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಅಗತ್ಯವಿರುವಷ್ಟು ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದೆ.

ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಇಂಧನ ಸಚಿವ ಕೆಜೆ.ಜಾರ್ಜ್ ಅವರು, ಬೇಸಿಗೆಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇಕಡಾ.30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು.

ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಈ ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಯೋಜನೆ ರೂಪಿಸಲಾಗಿದೆ. ನೆರೆ ರಾಜ್ಯಗಳಿಂದ ದೀರ್ಘಾವದಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ. ಹೀಗಾಗಿ ಹೆಚ್ಚುವರಿ ವಿದ್ಯುತ್ತನ್ನು ಪೀಕ್ ಅವರ್ ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಇಲಾಖೆಗೂ ಲಾಭವಾಗುತ್ತದೆ. ಈ ಸಂಬಂಧ ಚರ್ಚೆಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ನಿಗೂಢ ಶಬ್ಧ: ಭೂಮಿ ಕಂಪಿಸಿದ ಅನುಭವ, ಬೆಚ್ಚಿಬಿದ್ದ ಜನತೆ

ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಡಿ.24ರಂದು ವಿಶೇಷ ರೈಲು ಸೇವೆ, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!

SCROLL FOR NEXT