ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್, ಪರಮೇಶ್ವರ್ ಮತ್ತಿತರರು 
ರಾಜ್ಯ

ಬೆಳಗಾವಿಯಲ್ಲಿ ಜನವರಿ 21ಕ್ಕೆ ಜೈ ಬಾಪು, ಜೈಭೀಮ್, ಜೈ ಸಂವಿಧಾನ ಸಮಾವೇಶ: ಡಿಕೆ ಶಿವಕುಮಾರ್

ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗುರುವಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸೆಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದ ಅಂಗವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ 21 ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಸಿದ್ಧತೆ ಕುರಿತು ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ. ಜನವರಿ 15 ಹಾಗೂ 16 ರಂದು ಸಚಿವರು, ಶಾಸಕರು, ಮುಖಂಡರು, ಮಾಜಿ ಶಾಸಕರು, ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

1924ರ ಕಾಂಗ್ರೆಸ್ ಅಧಿವೇಶನ ಕುರಿತ ಮಾಹಿತಿಯನ್ನೊಳಗೊಂಡ ಪುಸ್ತಕಗಳನ್ನು ಅಂದು ಬಿಡುಗಡೆ ಮಾಡಲಾಗುವುದು.ಈ ಸಮಾವೇಶಕ್ಕೆ ಪಕ್ಷದ ಎಲ್ಲರೂ ಭಾಗಿಯಾಗಲಿದ್ದು, ಗಾಂಧೀಜಿ ಅವರ ತತ್ವಗಳನ್ನು ಉಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!