ಡಿ.ಕೆ ಶಿವಕುಮಾರ್ 
ರಾಜ್ಯ

ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಸೋಮಣ್ಣ ಜೊತೆ ಚರ್ಚೆ: ಡಿ.ಕೆ ಶಿವಕುಮಾರ್

ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು.

ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ” ಎಂದು ಹೇಳಿದರು.

ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಕಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಬೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ ಎಂದರು.

ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು ಎಂದರು.

ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ. ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ” ಎಂದು ಹೇಳಿದರು.

ಕರ್ನಾಟಕಕ್ಕೆ ಸಂಬಂಧಿಸಿದ ನೀರಾವರಿ ಕೆಲಸಗಳು ಹಾಗೂ ಕಡತಗಳು ಸಚಿವರಾದ ವಿ.ಸೋಮಣ್ಣ ಅವರ ಗಮನಕ್ಕೆ ತರಬೇಕು ಎನ್ನುವ ನಿರ್ದೇಶನವಿರುವ ಕಾರಣಕ್ಕೆ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಕೆಲಸಗಳ ಬಗ್ಗೆ ವಿವರಣೆ ನೀಡಿದೆ” ಎಂದು ತಿಳಿಸಿದರು. ಮೇಕೆದಾಟು ವಿಚಾರ ಚರ್ಚೆಯಾಯಿತೆ ಎಂದು ಕೇಳಿದಾಗ, “ಅದರ ಬಗ್ಗೆ ಮಾಹಿತಿ ಬಹಿರಂಗಗೊಳಿಸಲು ಆಗುವುದಿಲ್ಲ” ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT