ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದ ನಕ್ಸಲೀಯರು 
ರಾಜ್ಯ

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ: ಶಸ್ತ್ರಾಸ್ತ್ರ ತ್ಯಜಿಸಿದ ನಕ್ಸಲೀಯರ ಪುನರ್‌ ವಸತಿಗೆ ಸರ್ಕಾರ ನೆರವು- ಸಿಎಂ ಸಿದ್ದರಾಮಯ್ಯ

ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ.

ಬೆಂಗಳೂರು: ಆರು ಮಂದಿ ನಕ್ಸಲೀಯರು ಬುಧವಾರ ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಶರಣಾದರು. ಇದರ ಸಂಕೇತವಾಗಿ ಮುಂಡಗಾರು ಲತಾ ನಕ್ಸಲ್ ಸಮವಸ್ತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಬಳಿಕ ಸಿದ್ದರಾಮಯ್ಯ ಸಂವಿಧಾನದ ಪ್ರತಿ ಹಾಗೂ ಹೂಗಳನ್ನು ಅವರಿಗೆ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಮಾಡಿಕೊಂಡರು. ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತಿತರ ನಾಯಕರು, ಅಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ರಾಯಚೂರಿನ ಮಾರಪ್ಪ ಅರೋಳಿ, ಚಿಕ್ಕಮಗಳೂರಿನ ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ ಹಾಗೂ ತಮಿಳುನಾಡಿನ ವೆಲ್ಲೂರಿನ ಕೆ. ವಸಂತ್ ಅವರು ಶಸ್ತ್ರ ತ್ಯಜಿಸಿ ಶರಣಾಗಿರುವುದಾಗಿ ತಿಳಿಸಿದರು. ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ನ್ಯಾಯಯುತವಾಗಿ ಮಾಡಬೇಕು ಎಂದರು.

ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ.

ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಹೇಳಿದರು.

ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ‌ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ, ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆಗಳ ಉದ್ದೇಶವೂ ಇದೇ ಆಗಿದೆ. ಬಡವರು ಗೌರವಯುತವಾಗಿ ಬದುಕಲು ಅವಕಾಶ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ನಕ್ಸಲಿಸಂ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಬಹಿರಂಗವಾಗಿ ಹೇಳಿದ್ದೆ. ಅವರನ್ನು ಕ್ರಿಮಿನಲ್‌ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ ಎಂದು ತಿಳಿಸಿದರು.

ನಕ್ಸಲೀಯರ ಪರವಾಗಿ ಮಾತನಾಡಿದ ಮುಂಡಗಾರು ಲತಾ, ಗೌರವದಿಂದ ಸಮಾಜದ ಮುಖ್ಯವಾಹಿನಿಗೆ ಬರಮಾಡಿಕೊಂಡಿದ್ದಕ್ಕೆ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದರು. ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗಿದ್ದು, ಕಾನೂನು ಮತ್ತು ಶಾಸನಬದ್ಧವಾಗಿ ಜನ ಪರ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT