ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!

ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ.

ಸಂಗ್ರಹ ಚಿತ್ರ
Vishwanath S
Updated On : 8 Jan 2025, 5:06 pm

ಮಂಗಳೂರು: ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ಪ್ರವಾಸಿಗರು ಸಮುದ್ರಪಾಲಾಗಿದ್ದಾರೆ. ಮೃತರು ಬೆಂಗಳೂರಿನ‌ ಸತ್ಯವೇಲು, ಚಿತ್ರದುರ್ಗದ ಮಂಜುನಾಥ್ ಮತ್ತು ಶಿವಮೊಗ್ಗದ ಶಿವಕುಮಾರ್ ಎಂದು ತಿಳಿದುಬಂದಿದೆ. ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶಿವಕುಮಾರ್ ಮತ್ತು ಸತ್ಯವೇಲು ಎಂಬವರ ಮೃತದೇಹ ಸಿಕ್ಕಿದ್ದು ಮಂಜುನಾಥ್ ಮೃತದೇಹಕ್ಕೆ ಹುಡುಕಾಟ ನಡೆಯುತ್ತಿದೆ. ಇವರೆಲ್ಲರೂ ಬೆಂಗಳೂರಿನ ಎಎಂಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Also Read

Mysuru Central Prison: ಕೇಕ್ ತಯಾರಿಸಲು ತಂದಿದ್ದ essence ಕುಡಿದು ಇಬ್ಬರು ಖೈದಿಗಳ ಸಾವು, ಮತ್ತೋರ್ವ ಗಂಭೀರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments