ಶ್ರೀಕೃಷ್ಣ ಮಠದ ಸಪ್ತೋತ್ಸವ PTI
ರಾಜ್ಯ

ಉಡುಪಿ: ಜನವರಿ 9ರಿಂದ ಶ್ರೀಕೃಷ್ಣ ಮಠ ಸಪ್ತೋತ್ಸವ, ಆಸ್ಟ್ರೇಲಿಯಾ ಸಂಸದ ಭಾಗಿ!

ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಆಸ್ಟ್ರೇಲಿಯಾದ ವಿಕ್ಟೋರಿಯಾ ಸಂಸದ ಜಾನ್ ಮುಲ್ಹೋಲ್ಯಾಂಡ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣಮಠದ ವಾರ್ಷಿಕ ಸಪ್ತೋತ್ಸವವು ಜನವರಿ 9ರಿಂದ 15ರವರೆಗೆ ನಡೆಯಲಿದೆ. ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಆಸ್ಟ್ರೇಲಿಯಾದ ವಿಕ್ಟೋರಿಯಾ ಸಂಸದ ಜಾನ್ ಮುಲ್ಹೋಲ್ಯಾಂಡ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಮಕರ ಸಂಕ್ರಮಣದ ಪವಿತ್ರದಂದು 8 ಶತಮಾನಗಳ ಹಿಂದೆ ಜಗದ್ಗುರು ಶ್ರೀಮನ್ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಶ್ರೀ ಕೃಷ್ಣ ನನ್ನು ಭಕ್ತರಿಗಾಗಿ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ್ದರು. ಮೆಲ್ಬೋರ್ನ್‌ನಲ್ಲಿರುವ ಶ್ರೀ ಪುತ್ತಿಗೆ ಮಠದ ಶಾಖೆಗೆ ಸರ್ಕಾರದ ಬೆಂಬಲವನ್ನು ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿದ ಮುಲ್ಹೋಲ್ಯಾಂಡ್ ಅವರನ್ನು ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯರು ಆಹ್ವಾನಿಸಿದ್ದಾರೆ ಎಂದು ಅವರು ಹೇಳಿದರು.

ಖ್ಯಾತ ವಿದ್ವಾಂಸರು ಮತ್ತು ಶ್ರೀಕೃಷ್ಣನ ಭಕ್ತಗಣ, ಗಣ್ಯರು ಭಾಗವಹಿಸುತ್ತಾರೆ. ಇದೇ ವೇಳೆ ಭಾಗವತ ಪ್ರವಚನಗಳಿಗೆ ಹೆಸರುವಾಸಿಯಾದ ಗೌಡೀಯ ಮಧ್ವ ಮಠದ ಶ್ರೀ ಪುಂಡರೀಕ ಗೋಸ್ವಾಮಿಗಳು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ: ವಿಂಡೀಸ್ ವಿರುದ್ಧ ಗೆಲುವು; T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್