ಅಪಘಾತ  
ರಾಜ್ಯ

ಬಸ್ಸು-ಕ್ಯಾಂಟರ್ ನಡುವೆ ಡಿಕ್ಕಿ: ಕೋಲಾರ ಮೂಲದ ನಾಲ್ವರು ಸಾವು

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು.

ಕೋಲಾರ: ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತಪಟ್ಟವರಾಗಿದ್ದಾರೆ. ನಲ್ಲೂರು ಗ್ರಾಮದ ಸರಸ್ವತಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

ನಿನ್ನೆ ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್​ಆರ್​ಟಿಸಿ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ