ಸಂಗ್ರಹ ಚಿತ್ರ 
ರಾಜ್ಯ

KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿಮೀ ಗೆ 7 ರೂ ಹೆಚ್ಚಳ

ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ‍್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್'ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ.

ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಗುತ್ತಿಗ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ.

ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ‍್ಯಾಲಿ ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಕೆಎಸ್ಆರ್'ಟಿಸಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತದೆ. ಈ ಬಸ್ ಗಳ ದರವನ್ನೂ ಇದೀಗ ಪರಿಷ್ಕರಿಸಲಾಗಿದೆ. ಇಷ್ಟು ದಿನ ಪ್ರತಿ ಕಿಮೀ.ಗೆ 47 ರೂ ದರದಲ್ಲಿ ಬಸ್ ಗಳನ್ನು ಬಾಡಿಗೆಗೆ ನೀಡಲಾಗುತ್ತಿತ್ತು. ಇದೀಗ ಈ ದರನ್ನು 54 ರೂ.ಗೆ ಪರಿಷ್ಕರಿಸಲಾಗಿದ್ದು, ಇದರ ಪರಿಣಾಮ ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳವಾಗಿದೆ. ಕರ್ನಾಟಕದ ಹೊರಗಿನ ಸೇವೆಗಳಿಗೆ, ಪ್ರತಿ ಕಿ.ಮೀ.ಗೆ 50 ರೂ.ನಿಂದ 57 ರೂ.ಗೆ ಹೆಚ್ಚಿಸಲಾಗಿದೆ.

ರಾಜ್ಯದೊಳಗೆ ಪ್ರತಿ ಕಿ.ಮೀ.ಗೆ 52 ರೂ.ನಂತೆ ಕಾರ್ಯನಿರ್ವಹಿಸುತ್ತಿದ್ದ ಅಶ್ವಮೇಧ ಸೇವೆಗಳನ್ನು ಪ್ರತಿ ಕಿ.ಮೀ.ಗೆ 58 ರೂ.ಗೆ ಹೆಚ್ಚಿಸಲಾಗಿದೆ, ಇದರಂತೆ ಪ್ರತಿ ಕಿ.ಮೀ.ಗೆ 6 ರೂ. ಹೆಚ್ಚಳವಾಗಿದೆ. ರಾಜಹಂಸ, ಐರಾವತ, ಪಲ್ಲಕ್ಕಿ, ಅಂಬಾರಿ, ಮಿಡಿ ಬಸ್, ಎಸಿ ಅಲ್ಲದ ಸ್ಲೀಪರ್, ಫ್ಲೈ ಬಸ್ ಮತ್ತು ಇತರ ಎಲ್ಲಾ ಬಸ್ ಸೇವೆಗಳ ದರವನ್ನೂ ಹೆಚ್ಚಳ ಮಾಡಲಾಗಿದೆ.

ಮುಂಗಡವಾಗಿ ಸೇವೆಗಳನ್ನು ಬುಕ್ ಮಾಡಿದವರಿಗೆ ಹಳೆಯ ದರಗಳ ಪ್ರಕಾರ ಶುಲ್ಕ ವಿಧಿಸಲಾಗುತ್ತದೆ. ಅಶ್ವಮೇಧದ ದರಗಳು ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 58 ರೂ. ಮತ್ತು ರಾಜ್ಯದ ಹೊರಗೆ 61 ರೂ. ಇರಲಿದೆ.

ರಾಜಹಂಸ ಬಸ್ ಸೇವೆ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 59 ರೂ. ಮತ್ತು ಹೊರಗೆ 63 ರೂ., ಪಲ್ಲಕ್ಕಿ ಬಸ್‌ಗಳ ದರ ಕರ್ನಾಟಕದೊಳಗೆ ಪ್ರತಿ ಕಿ.ಮೀ.ಗೆ 80 ರೂ. ಮತ್ತು ರಾಜ್ಯದ ಹೊರಗೆ 85 ರೂ ಇರಲಿದೆ.

ಜನವರಿ 7 ರಂದು ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದ್ದು, ಡೀಸೆಲ್ ದರ ಹೆಚ್ಚಳ ಮತ್ತು ನೌಕರರ ವೇತನದಲ್ಲಿನ ಹೆಚ್ಚಳದಿಂದಾಗಿ ಕಾರ್ಯಾಚರಣೆಯ ವೆಚ್ಚದಲ್ಲಿ ಹೆಚ್ಚಳ ಮಾಡಲಾಗಿದೆ. ಇದು ಜನವರಿ 8 ರಿಂದ ಹೊಸ ದರಗಳು ಜಾರಿಗೆ ಬರಲಿದೆ ಎಂದು ತಿಳಿಸಿದೆ.

ನಿಯಮಿತ ದೈನಂದಿನ ಕಾರ್ಯಾಚರಣೆಗಳಿಂದ ಬರುವ ಆದಾಯದ ಜೊತೆಗೆ, ಒಪ್ಪಂದದ ಸೇವೆಗಳು ಬಸ್ ನಿಗಮಕ್ಕೆ ಆದಾಯದ ಪ್ರಮುಖ ಮೂಲಗಳಾಗಿವೆ. ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳಿಂದಾಗಿ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!