ರುದ್ರಗೌಡ ಪಾಟೀಲ್  
ರಾಜ್ಯ

FDA ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್​ಡಿ ಪಾಟೀಲ್‌ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2023 ರ ಅಕ್ಟೋಬರ್​​​ 28 ರಂದು ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು.

ನವದೆಹಲಿ: ಪ್ರಥಮ ದರ್ಜೆ ಸಹಾಯಕ(FDA) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಮುಖ್ಯ ಆರೋಪಿ ಆರ್‌ಡಿ ಪಾಟೀಲ್‌ಗೆ (ರುದ್ರಗೌಡ ಪಾಟೀಲ್) ಸುಪ್ರೀಂಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ. ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಿಆರ್ ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ನಿರಾಕರಿಸಿ ಆದೇಶ ಪ್ರಕಟಿಸಿದೆ.

2023 ರ ಅಕ್ಟೋಬರ್​​​ 28 ರಂದು ಕೆಪಿಎಸ್​ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆದಿತ್ತು. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಎಫಡಿಎ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದರು. ಈ ಸಂಬಂಧ ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ನಂತರ ಹಲವರ ಬಂಧನವಾಗಿತ್ತು.

ಅಕ್ರಮದ ವಿಚಾರಣೆ ವೇಳೆ, ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ ಹೆಸರು ಹೊರಬಿದ್ದಿತ್ತು. ಆತನನ್ನು ಬಂಧಿಸಿ ಪ್ರಕರಣದ ತನಿಖೆಯ ಹೊಣೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿತ್ತು.

ಪಿಎಸ್‌ಐ ಪರೀಕ್ಷೆ ಹಗರಣದಲ್ಲಿ ಕೂಡ ಆರ್​​ಡಿ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಕಾಲೇಜು ಆಡಳಿತ ಮಂಡಳಿಗಳ ಜತೆ ಕೈಜೋಡಿಸಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಉತ್ತರಗಳನ್ನು ಬ್ಲೂಟೂಥ್ ಡಿವೈಸ್ ಮೂಲಕ ಕಳುಹಿಸುತ್ತಿದ್ದ ಎಂದು ವಿಚಾರಣೆ ವೇಳೆ ಬಹಿರಂಗವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ