ಪ್ರಿಯಾಂಕ್ ಖರ್ಗೆ-ರಾಜು ಕಪನೂರು-ಸಚಿನ್ 
ರಾಜ್ಯ

ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಆಪ್ತ ರಾಜು ಸೇರಿ ಐವರ ಬಂಧನ

ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೀದರ್: ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಶುಕ್ರವಾರ ಬಂಧಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು.

ಸಿಐಡಿ ಪೊಲೀಸರು ಪ್ರಕರಣ ಸಂಬಂಧ ಇಂದು ಬೀದರ್​ನಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳಿಗೆ ವಿಚಾರಣೆಗೆ ಬರುವಂತೆ ಸಿಐಡಿ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್​ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಸೂಕ್ತವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಗುತ್ತಿಗೆದಾರ ಸಚಿನ್ ಕಳೆದ ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದರು. 15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಡೆತ್​ನೋಟ್​ನಲ್ಲಿ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

IPL 2026: 'ಹಾರ್ದಿಕ್ ಪಾಂಡ್ಯ ರಿಲೀಸ್': ಮತ್ತೊಂದು ವೈಫಲ್ಯದ ನಂತರ ಸ್ಪಷ್ಟ ಸಂದೇಶ ರವಾನಿಸಿದ MI

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

SCROLL FOR NEXT