ಪವಿತ್ರಾ ಗೌಡ-ದರ್ಶನ್  
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ನ್ಯಾಯಾಲಯಕ್ಕೆ ಹಾಜರು; ಮುಂದಿನ ವಿಚಾರಣೆ ಫೆಬ್ರವರಿ 25ಕ್ಕೆ ಮುಂದೂಡಿಕೆ

ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು ಶುಕ್ರವಾರ ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಮೊದಲೇ ಬಂದಿದ್ದ ಪವಿತ್ರಾ ಗೌಡ, ತಮ್ಮ ವಕೀಲರೊಂದಿಗೆ ಕೋರ್ಟ್ ಆವರಣದಲ್ಲಿ ಚರ್ಚಿಸುತ್ತಾ ನಿಂತಿದ್ದರು. ಇತರೆ ಆರೋಪಿಗಳು ಸಹ ತಮ್ಮ ತಮ್ಮ ವಕೀಲರೊಡನೆ ಕೋರ್ಟ್​ಗೆ ಹಾಜರಾಗಿದ್ದರು.

ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್