ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮದ್ಯ ಪ್ರಿಯರಿಗೆ ಶಾಕ್: ಜನವರಿ 20 ರಿಂದ ಬಿಯರ್ ಬೆಲೆ ಹೆಚ್ಚಳ ಸಾಧ್ಯತೆ

ಜನವರಿ 20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿವರೆಗೂ ಹೆಚ್ಚಳವಾಗುವ ಸಾಧ್ಯತೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 10 Jan 2025, 7:30 pm

ಬೆಂಗಳೂರು: ಇತ್ತೀಚಿಗಷ್ಟೇ ಬಸ್​ ಪ್ರಯಾಣ​ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದ್ದು, ಒಂದು ವರ್ಷದಲ್ಲಿ ಮೂರನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಜೆಟ್​ಗೂ ಮುನ್ನವೇ ಬಿಯರ್​ ದರ ಏರಿಕೆ ಮಾಡಲು ನಿರ್ಧರಿಸಿದೆ.

ಜನವರಿ 20ರಿಂದ ಬಿಯರ್ ಬೆಲೆ ಕನಿಷ್ಠ 15 ರೂಪಾಯಿಯಿಂದ 50 ರೂಪಾಯಿ ವರೆಗೂ ಹೆಚ್ಚಳವಾಗುವ ಸಾಧ್ಯತೆ ಇದ್ದು, ಒಂದು ವೇಳೆ ಹೆಚ್ಚಳವಾದರೆ ಒಂದು ವರ್ಷದಲ್ಲಿ ಮೂರನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳವಾದಂತೆ ಆಗುತ್ತದೆ.

Advertisement

Advertisement

Also Read

ಮದ್ಯ ಪ್ರಿಯರಿಗೆ ಶಾಕ್: ಬಜೆಟ್‌ಗೂ ಮುನ್ನ ಬಿಯರ್ ದರ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ

ಈ ಬಗ್ಗೆ ಪ್ರತಿಕ್ರಿಯಿಸಿದ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು, ಬಿಯರ್ ಬೆಲೆ ಏರಿಕೆ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಬಿಯರ್ ಬೆಲೆ ಹೊರತುಪಡಿಸಿ ಬೇರೆ ಯಾವುದೇ ಮದ್ಯದ ಬೆಲೆಯ ಹೆಚ್ಚಳದ ಬಗ್ಗೆ ಚಿಂತನೆ ಇಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಇನ್ನು ಚರ್ಚಿಸಬೇಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments