ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡ್ರಗ್ ಸ್ಮಗ್ಲರ್  
ರಾಜ್ಯ

ಕಲಬುರಗಿ: ಕಾನ್ಸ್ ಟೇಬಲ್ ಮೇಲೆ ಹಲ್ಲೆಗೆ ಯತ್ನ, ಕಾಲಿಗೆ ಗುಂಡಿಕ್ಕಿ ಡ್ರಗ್ ಸ್ಮಗ್ಲರ್ ಬಂಧಿಸಿದ ಪೊಲೀಸರು

ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಕಲಬುರಗಿ: ಮಾದಕ ವಸ್ತು ಕಳ್ಳಸಾಗಣೆದಾರನೊಬ್ಬನನ್ನು ಹಿಡಿಯಲು ಪ್ರಯತ್ನಿಸಿದ ಹೆಡ್‌ಕಾನ್ಸ್‌ಟೇಬಲ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶನಿವಾರ ನಡೆದಿದೆ. ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಅನುಮಾನಾಸ್ಪದ ವ್ಯಕ್ತಿಯ ಬಗ್ಗೆ ಮಾಹಿತಿ ಪಡೆದ ಇನ್ಸ್‌ಪೆಕ್ಟರ್ ಚೌಕ್ ರಾಜೇಂದ್ರ ಅವರು ಅಪರಾಧ ಪತ್ತೆ ತಂಡದೊಂದಿಗೆ ತನಿಖೆಗೆ ತೆರಳಿದರು. ಈ ವೇಳೆ ಕಾರಿನಲ್ಲಿದ್ದ ಶಂಕಿತನನ್ನು ನೋಡಿದ ಇನ್ಸ್ ಪೆಕ್ಟರ್ ಕಾರು ನಿಲ್ಲಿಸಲು ಚಾಲಕನಿಗೆ ಹೇಳಿದ್ದಾರೆ. ತಕ್ಷಣ ಶಂಕಿತನು ಕಾರಿನಿಂದ ಹೊರಬಂದು ಹೆಡ್ ಕಾನ್ಸ್‌ಟೇಬಲ್ ಗುರುಮೂರ್ತಿ ಮೇಲೆ ದಾಳಿ ಮಾಡಿದ್ದು, ಅವರು ಗಂಭೀರವಾಗಿ ಗಾಯಗೊಂಡರು ಎಂದು ಕಮಿಷನರ್ ಹೇಳಿದರು.

ಆರೋಪಿ ಸುಪ್ರೀತ್ ನವಲೆ ಕಲಬುರಗಿ ನಗರದ ಮುತ್ತಂಪುರ ನಿವಾಸಿಯಾಗಿದ್ದಾನೆ. ಆತನ ಕಾರನ್ನು ತಪಾಸಣೆ ನಡೆಸಿದಾಗ ನೈಟ್ರೊವೆಟ್ ಮಾತ್ರೆಗಳು ಸೇರಿದಂತೆ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂದಿದೆ.

ಘಟನೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಶಂಕಿತ ಆರೋಪಿ ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಯುಕ್ತರು ಖಚಿತಪಡಿಸಿದ್ದಾರೆ.

ಆರೋಪಿಯು ಈಗಾಗಲೇ ಮೂರು ಎನ್‌ಡಿಪಿಎಸ್ ಪ್ರಕರಣಗಳಲ್ಲಿ (ಮಾದಕ ವಸ್ತು ಕಳ್ಳಸಾಗಣೆ) ಭಾಗಿಯಾಗಿರುವುದು ತಿಳಿದುಬಂದಿದೆ. ಆತನ ಮೂಲ ಮತ್ತು ಯಾರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಎಂಬುದನ್ನು ಪತ್ತೆಹಚ್ಚಲು ಆತ ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.

ಹೈದರಾಬಾದ್‌ನಲ್ಲಿ ಆರೋಪಿ ವಿರುದ್ಧ ಹಲವು ಪ್ರಕರಣಗಳಿದ್ದು, ಎಲ್ಲಾದರ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT