ಕರ್ನಾಟಕ ಹೈಕೋರ್ಟ್ 
ರಾಜ್ಯ

KPCL ನೇಮಕಾತಿ: ಕನ್ನಡ ಭಾಷೆ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ ಎಂದು ನ್ಯಾಯಾಲಯ ಹೇಳಿದೆ.

ಬೆಂಗಳೂರು: ಹೈದರಾಬಾದ್-ಕರ್ನಾಟಕ ಮತ್ತು ಇತರೆ ಕೋಟಾಗಳ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಎಂಜಿನಿಯರ್(ಮೆಕ್ಯಾನಿಕಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ 'ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ(ಕೆಪಿಸಿಎಲ್‌)ಕ್ಕೆ ಆದೇಶಿಸಿದೆ.

“ನೇಮಕಾತಿ ಅಧಿಸೂಚನೆಯು ಕನ್ನಡ ಭಾಷಾ ಪರೀಕ್ಷೆಗೆ ಗರಿಷ್ಠ 150 ಅಂಕಗಳನ್ನು ಸ್ಪಷ್ಟವಾಗಿ ಸೂಚಿಸಿದ್ದರೂ, ಈಗಾಗಲೇ ನಡೆಸಲಾದ ಪರೀಕ್ಷೆಯ ನಂತರ ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ” ಎಂದು ನ್ಯಾಯಾಲಯ ಹೇಳಿದೆ.

ಕನ್ನಡ ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕಗಳಿಗೆ ಬದಲಾಗಿ 36 ಅಂಕಗಳನ್ನು ಗಳಿಸಿದ್ದಾರೆ ಎಂಬ ಕಾರಣಕ್ಕೆ ವಿಜಯಪುರ ಜಿಲ್ಲೆಯ ಗೀತಾ ಚವಾಣ್ ಅವರ ಆಯ್ಕೆಯನ್ನು ತಿರಸ್ಕರಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರು, ಪರೀಕ್ಷೆ ನಡೆಸಿದ ನಂತರ ನಿಗದಿಪಡಿಸಲಾದ ಕನಿಷ್ಠ 50 ಅಂಕಗಳ ಅರ್ಹತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸೇವಾ(ಕೇಡರ್, ನೇಮಕಾತಿ, ಪ್ರೊಬೇಷನ್, ಬಡ್ತಿ ಮತ್ತು ಹಿರಿತನ) ನಿಯಮಗಳು, 1988 ರ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT