ಸಂಗ್ರಹ ಚಿತ್ರ 
ರಾಜ್ಯ

ಸಿಟಿ ರವಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದೆಂಬುದು ಸರ್ಕಾರ, ಪೊಲೀಸರಿಗೆ ಗೊತ್ತಿದೆ: BJP ಆರೋಪ

ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು.

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಸರ್ಕಾರ ಹಾಗೂ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ.

ಸಿಟಿ ರವಿ ಅವರನ್ನು ಗುರಿಯನ್ನಾಗಿಸಿಕೊಂಡಿರುವ ದುಷ್ಕರ್ಮಿಗಳು ಅವರ ವಿರುದ್ಧ ವ್ಯೂಹ ರಚಿಸಿರುವ ಸಾಧ್ಯತೆಯನ್ನು ಅವರಿಗೆ ಬಂದಿರುವ ಬೆದರಿಕೆಯ ಸಂದೇಶಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು ಮಾರ್ಜಾಲ ನ್ಯಾಯದಂತಾಗುತ್ತದೆ ಎಂದು ಹೇಳಿದ್ದಾರೆ.

ಸಿಟಿ ರವಿ ಅವರಿಗೆ ಬೆದರಿಕೆ ಒಡ್ಡಲಾಗುತ್ತಿರುವ ಶಕ್ತಿಗಳು ಯಾವುದು ಎಂಬುದು ಸರ್ಕಾರ ಹಾಗೂ ಪೊಲೀಸರಿಗೆ ತಿಳಿದೇ ಇದೆ, ಇಷ್ಟಾಗಿಯೂ ದುಷ್ಕ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂಬುದು ಬಹಿರಂಗ ಸತ್ಯ. ಈ ನಿಟ್ಟಿನಲ್ಲಿ ಸಿಟಿ ರವಿ ಅವರ ರಕ್ಷಣೆಗೆ ವಿಶೇಷ ಭದ್ರತೆ ಒದಗಿಸಲು ಒತ್ತಾಯಿಸುವೆ. ಶಾಸಕ ಸಿಟಿ ರವಿ ಅವರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಇಂತಹ ಬೆದರಿಕೆ, ದೌರ್ಜನ್ಯಗಳು ಮುಂದುವರೆದಲ್ಲಿ ಬಿಜೆಪಿ ಅದನ್ನು ಸವಾಲಾಗಿ ಸ್ವೀಕರಿಸಿ ಹೋರಾಡಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!