ಸಾಂದರ್ಭಿಕ ಚಿತ್ರ 
ರಾಜ್ಯ

'ಸಮಾಜ ನಮ್ಮ ಪ್ರೀತಿ ಒಪ್ಪಲ್ಲ'; ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ; ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ ಪ್ರಿಯತಮೆ ಆತ್ಮಹತ್ಯೆ

ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿದ್ದಾರೆ.

ಬೆಂಗಳೂರು: ಪ್ರೀತಿ ವಿಚಾರವಾಗಿ 2 ಮಕ್ಕಳ ತಾಯಿ ಮತ್ತು ಆಕೆಯ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 'ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿದ್ದಾರೆ. ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್‌ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಥಣಿಸಂದ್ರ ಮೂಲದ ಜಾನ್ಸನ್ ಎಂಬುವವರನ್ನು ದಿಲ್ಶಾದ್‌ ಪ್ರೀತಿಸುತ್ತಿದ್ದರು. ಸಾಮಾಜಿಕ ಮಾಧ್ಯಮಗಳ ಮೂಲಕ ಇವರಿಬ್ಬರ ಪರಿಚಯವಾಗಿತ್ತು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಅದಾಗಲೇ ಮದುವೆಯಾಗಿತ್ತು.

ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆದಾಗ್ಯೂ ಜಾನ್ಸನ್ -ದಿಲ್ಶಾದ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ಜಾನ್ಸನ್ ಮನನೊಂದಿದ್ದ. ಬಳಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಬೆಳಗ್ಗೆ ಪ್ರಿಯತಮ, ಮಧ್ಯಾಹ್ನ ಪ್ರಿಯತಮೆ ಆತ್ಮಹತ್ಯೆ

ಇಂದು ಬೆಳಗ್ಗೆ ಕೆಲಸಕ್ಕೆ ಹೋದ ಜಾಗದಲ್ಲಿ ಜಾನ್ಸನ್ ಥಣಿಸಂದ್ರದಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲಿಗೆ ಹೋಗಿದ್ದ ದಿಲ್ಶಾದ್‌ ಶವ ನೋಡಿಕೊಂಡು ಬಂದಿದ್ದಳು. ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆ ಮಧ್ಯಾಹ್ನದ ವೇಳೆಗೆ ತಾನೂ ನೇಣಿಗೆ ಶರಣಾಗಿದ್ದಾಳೆ.

ಪ್ರಿಯಕರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂತೆಯೇ ಮಹಿಳೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಲ್ಶಾದ್ ತಾಯಿ ಬೇಗಂ ನೀಡಿದ ದೂರಿನ ಆಧಾರದ ಮೇಲೆ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

ಸಹಾಯವಾಣಿ

ನೀವು ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಅಂತಹ ಆಲೋಚನೆಗಳಿರುವ ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ನಿಮ್ಮ ಭಾವನಾತ್ಮಕ ಬೆಂಬಲಕ್ಕಾಗಿ ಸಂಪರ್ಕಿಸಿ ಸ್ನೇಹ ಫೌಂಡೇಶನ್ - 04424640050, ಟೆಲಿ ಮಾನಸ್ - 14416 (24x7 ಲಭ್ಯವಿದೆ) ಅಥವಾ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 02225521111 ಗೆ ಕರೆ ಮಾಡಿ, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT