ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಮಂಡ್ಯ: ಸಂವಿಧಾನದ ಆಶಯದಂತೆ ಮೋದಿ ಸರ್ಕಾರ ಕಾರ್ಯನಿರ್ವಹಣೆ- ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 'ಬೌದ್ಧ ಅಂಬೇಡ್ಕರ್ ಮಹಾದ್ವಾರ'ವನ್ನು ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ..

ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 'ಬೌದ್ಧ ಅಂಬೇಡ್ಕರ್ ಮಹಾದ್ವಾರ'ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ದಲಿತರಿಗೆ ದೇವೆಗೌಡರ ಕೊಡುಗೆ: ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.

ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ ,ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ಅವರು ಹೇಳಿದರು.

ಕಲ್ಕುಣಿ ಗ್ರಾಮದಲ್ಲಿ ಸಮುದಾಯ: ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕೇಂದ್ರ ಸಚಿವರಿಗೆ ಬೇಡಿಕೆ ಮಂಡಿಸಿದರು. ಇದಕ್ಕೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು.

ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಮುಂತಾದವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT