ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಉದ್ಯಮಿಗೆ 2 ಕೋಟಿ ರೂಪಾಯಿ ವಂಚನೆ; 7 ಮಂದಿ ಬಂಧನ

ಏಳು ಆರೋಪಿಗಳನ್ನು ಬೆಂಗಳೂರು ಮತ್ತು ಮುಂಬೈನಲ್ಲಿ ಬಂಧಿಸಲಾಗಿದೆ, ಆದರೆ, ಗ್ಯಾಂಗ್‌ನ ಇತರ ಐದು ಮಂದಿ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸಬಹುದು ಎಂದು ಹೇಳಿ ಹೇಳಿಕೊಂಡು 34 ವರ್ಷದ ಉದ್ಯಮಿಯೊಬ್ಬರಿಗೆ 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಏಳು ಆರೋಪಿಗಳನ್ನು ಬೆಂಗಳೂರು ಮತ್ತು ಮುಂಬೈನಲ್ಲಿ ಬಂಧಿಸಲಾಗಿದೆ, ಆದರೆ ಗ್ಯಾಂಗ್‌ನ ಇತರ ಐದು ಮಂದಿ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಳು ಮಂದಿಯಲ್ಲಿ ಮೂವರು ಕೇರಳ, ಓರ್ವ ಮುಂಬೈ ಹಾಗೂ ಮೂವರು ಬೆಂಗಳೂರಿನವರಾಗಿದ್ದು, ಮಲೇಷ್ಯಾ ಮೂಲದ ಕಂಪನಿಯ ಪ್ರತಿನಿಧಿಗಳು ಎಂದು ಹೇಳಿ ವಂಚಿಸಿದ್ದಾರೆ.

‘ಮಲೇಷ್ಯಾ OIA: ಅಚಿಥಿ ಇಂಚಿತ್ ಸೆಡಿ ಹ್ಚಿಜ್’ ಎಂಬ ನಕಲಿ ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಒಂದು ದಿನದೊಳಗೆ ಹೂಡಿಕೆಯನ್ನು ದ್ವಿಗುಣಗೊಳಿಸುವುದಾಗಿ ಆರೋಪಿಗಳು ಸಂತ್ರಸ್ತ ವ್ಯಕ್ತಿಯನ್ನು ನಂಬಿಸಿದ್ದರು.

ಬಳಿಕ ಆರ್‌ಟಿಜಿಎಸ್/ಎನ್‌ಇಎಫ್‌ಟಿ ಮೂಲಕ 3.5 ಕೋಟಿ ರೂಪಾಯಿಗಳನ್ನು ಒಂದೇ ದಿನದೊಳಗೆ ಹಿಂದಿರುಗಿಸುವುದಾಗಿ ಭರವಸೆ ನೀಡಿ 2 ಕೋಟಿ ರೂಪಾಯಿ ಹೂಡಿಕೆ ಮಾಡುವಂತೆ ಮನವೊಲಿಸಿದ್ದರು.

ಸಂತ್ರಸ್ತ ವ್ಯಕ್ತಿ ನಾಗರಥಪೇಟೆಯಲ್ಲಿರುವ ಅವರ ಕಚೇರಿಗೆ ಭೇಟಿ ನೀಡಿ 2 ಕೋಟಿ ರೂಪಾಯಿಗಳನ್ನು ಹಸ್ತಾಂತರಿಸಿದ್ದರು. ಇದಕ್ಕೆ ಪ್ರತಿಯಾಗಿ ಆರೋಪಿಗಳು ಸಂತ್ರಸ್ತ ವ್ಯಕ್ತಿಗೆ 9,780 ರೂ.ಗಳನ್ನು ವರ್ಗಾಯಿಸಿ, ಅದು ಮುಂಗಡ ಹಣವಾಗಿದ್ದು, ಉಳಿದ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದಾಗ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಮೊಬೈಲ್ ಸಂಖ್ಯೆಗಳೂ ಕೂಡ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಬಳಿಕ ವಂಚನೆಗೊಳಗಾಗಿರುವುದನ್ನು ಮನಗಂಡ ಅವರು, ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!