ಅಪಘಾತ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು: ಹುಟ್ಟುಹಬ್ಬದಂದೇ ರಸ್ತೆ ಅಪಘಾತ, ಬಾಲಕ ದುರ್ಮರಣ..!

ಆಂಧ್ರ ಪ್ರದೇಶದ ಚಿತ್ತೂರು ಮೂಲದ ಭಾನುತೇಜ (12) ಮೃತ ಬಾಲಕ. ಬಾಲಕನ ಚಿಕ್ಕಪ್ಪ ಚಕ್ರವರ್ತಿಗೆ ಸಣ್ಣ ಪ್ರಮಾಣದ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಬೆಂಗಳೂರು: ಹುಟ್ಟುಹಬ್ಬ ಆಚರಿಸಿಕೊಂಡು ಚಿಕ್ಕಪ್ಪನ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರಣ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಆಂಧ್ರ ಪ್ರದೇಶದ ಚಿತ್ತೂರು ಮೂಲದ ಭಾನುತೇಜ (12) ಮೃತ ಬಾಲಕ. ಬಾಲಕನ ಚಿಕ್ಕಪ್ಪ ಚಕ್ರವರ್ತಿಗೆ ಸಣ್ಣ ಪ್ರಮಾಣದ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಶನಿವಾರ ರಾತ್ರಿ 11.30 ರ ಸುಮಾರಿಗೆ ಹುಳಿಮಾವುದಿಂದ ಆರ್‌ಟಿ ನಗರಕ್ಕೆ ಹೋಗುತ್ತಿದ್ದಾಗ, ಹೆಣ್ಣೂರು ಬಂಡೆ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಟ್ರಕ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕ ಹುಟ್ಟುಹಬ್ಬ ಆಚರಣೆಗಾಗಿ ತನ್ನ ಚಿಕ್ಕಪ್ಪನ ಮನೆಗೆ ಭೇಟಿ ನೀಡಿದ್ದ. ಊಟದ ಬಳಿಕ ಚಿಕ್ಕಪ್ಪನೊಂದಿಗೆ ದೇವಸ್ಥಾನಕ್ಕೆ ಹೋಗುತ್ತಿದ್ದ. ಕಳೆದ ಕೆಲ ತಿಂಗಳುಗಳಿಂದ ಬಾಲಕ ಇದೇ ದೇವಾಲಯದಲ್ಲಿದ್ದುಕೊಂಡು ವೇದಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಟ್ರಕ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಹೆಣ್ಣೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel