ಚೈತ್ರಾ ಕುಂದಾಪುರ 
ರಾಜ್ಯ

ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಾಯಿ, ಬೆಕ್ಕಿನ ಜೀವಕ್ಕೆ ಕೊಡೋ ಬೆಲೆ ಗೋಮಾತೆಗಿಲ್ವಾ?: BiggBoss ಖ್ಯಾತಿಯ ಚೈತ್ರಾ ಕುಂದಾಪುರ ಆಕ್ರೋಶ!

ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ಬೆಂಗಳೂರು: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿ, ಬೆಕ್ಕಿನ ಜೀವಕ್ಕೆ ಹಾನಿಯಾದಾಗ ಪ್ರಾಣಿದಯಾ ಸಂಘದವರು ಬೊಬ್ಬೆ ಹೊಡೆದುಕೊಂಡು ಬರುತ್ತಾರೆ. ಆದರೆ ನಾವು ಪೂಜಿಸುವ, ಅದರ ಹಾಲನ್ನು ಕುಡಿಯುವ ಗೋಮಾತೆಗೆ ತೊಂದರೆಯಾದಾಗ ಯಾಕೆ ಮಾತನಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ಗೋವುಗಳನ್ನು ಹಸು ಅಂತ ನೋಡಲ್ಲ ಮಾತೆ ಎಂದು ಪೂಜಿಸುತ್ತೇವೆ. ಕುಡಿದ ಮತ್ತಿನಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಬೇಕೆಂದೇ ಉದ್ದೇಶಪೂರ್ವಕವಾಗಿ ಮಾಡಿರುವಂತ ವಿಕೃತಿ ಕೆಲಸ. ಆರೋಪಿ ವಿರುದ್ಧ BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವ ಪ್ರಕರಣವನ್ನು ದಾಖಲಿಸಬೇಕು ಎಂದು ಚೈತ್ರಾ ಹೇಳಿದ್ದಾರೆ.

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಶೇಕ್ ನಸ್ರು (30) ಎಂದು ಗುರ್ತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT