ಅಪಘಾತ (ಸಾಂದರ್ಭಿಕ ಚಿತ್ರ) 
ರಾಜ್ಯ

ನಗರದಲ್ಲಿ ಸರಣಿ ಅಪಘಾತ: ಐವರಿಗೆ ಗಾಯ

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಫ್‌ಸಿ ಜಂಕ್ಷನ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಬಳಿಕ ಹೆಚ್ಚಿನ ಹಾನಿ ತಪ್ಪಿಸುವ ಸಲುವಾಗಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರಿಗೆ ಗಾಯಗೊಂಡಿದೆ.

ಘಟನೆ ಬಳಿಕ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೂರು ವಾಹನಗಳನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್