ಬಂಧಿತ ಆರೋಪಿ 
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ವಶಕ್ಕೆ, ಜನವರಿ 24 ರವರೆಗೆ ನ್ಯಾಯಾಂಗ ಬಂಧನ

ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್ ​ಪೇಟೆ ಪೊಲೀಸರು ಭಾನುವಾರ ರಾತ್ರಿ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ಶೇಕ್ ನಸ್ರು (30) ಎಂದು ಗುರ್ತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ. ಆರೋಪಿಯನ್ನು ಬಂಧಿಸಿ ಜನವರಿ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಡಿಸಿಪಿ (ಪಶ್ಚಿಮ) ಎಸ್ ಗಿರೀಶ್ ಅವರು ಹೇಳಿದ್ದಾರೆ.\

ಈ ಘಟನೆ ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿತ್ತು. ಹಸುಗಳ ಮಾಲೀಕ ಕರ್ಣ ಅವರು ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ​ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು.

ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET: ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ಪುಣೆ ಉಪನ್ಯಾಸಕಿ ಬಂಧನ

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan

IPL 2026: Top 2 ಸ್ಥಾನಕ್ಕಾಗಿ ಮದಗಜಗಳ ಕಾದಾಟ, 256 ರನ್ ಗಳ ಬೃಹತ್ ಮೊತ್ತ ಪೇರಿಸಿದ SRH, RCBಗೆ ಬೇಕು ಕನಿಷ್ಟ 166 ರನ್!

ಬಿಕಿನಿಯಲ್ಲಿ ರುಕ್ಮಿಣಿ ವಸಂತ್ ಬೋಲ್ಡ್ ಅವತಾರ! ಫೋಟೋ, ವಿಡಿಯೋ ವೈರಲ್

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದ ರೈತ ಸಂಘಟನೆಗಳು; ಮೇ.27ರಂದು ಮುಷ್ಕರಕ್ಕೆ ಕರೆ

SCROLL FOR NEXT