ಗಾಯಗೊಂಡ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸಚಿವ ಜಮೀರ್. 
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆಂದ ಸಚಿವ ಜಮೀರ್

ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಪ್ರಾಣಿಗಳ ಮೇಲೆ ಯಾಕೆ ದ್ವೇಷ, ಈ ರೀತಿ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ರೀತಿ ಮಾಡಬಾರದು. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವರ ಮೇಲೆ ಕಠಿಣ ಕ್ರಮ ಆಗಬೇಕು‌. ಮಾಲೀಕನಿಗೆ ವೈಯಕ್ತಿಕವಾಗಿ ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದೀನಿ ಎಂದು ತಿಳಿಸಿದರು. ಇದೇ ವೇಳೆ ಹಸು ಕೊಡಿಸೋ ಜವಾಬ್ದಾರಿ ನಿನ್ನದು ಎಂದು ವಿನಯ್ ಎಂಬಾತನಿಗೆ ಜಮೀರ್ ಅವರು ಸೂಚನೆ ನೀಡಿದರು.

ಆರೋಗ್ಯ ಸಚಿವ ಖಂಡನೆ

ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಹೇಳಿದ್ದಾರೆ.

ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!