ನಾಲ್ಕು ಮಕ್ಕಳು ನೀರುಪಾಲು 
ರಾಜ್ಯ

ವಿಜಯಪುರ: ಕರುಳ ಬಳ್ಳಿಯನ್ನೇ ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ; 4 ಮಕ್ಕಳು ನೀರುಪಾಲು

ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ‌ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ.

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿಯೊಬ್ಬಳು ಮಕ್ಕಳ ಸಮೇತ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿವೆ. ಇನ್ನು ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ‌ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿಯ, ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಮಕ್ಕಳನ್ನು ಕಾಲುವೆಗೆ ಎಸೆದಿದ್ದನ್ನು ನೋಡಿದ ಸ್ಥಳೀಯರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಕ್ಕಳು ನೀರುಪಾಲಾಗಿದ್ದವು. ಆದರೆ ತಾಯಿ ಭಾಗ್ಯ ಭಜಂತ್ರಿಯನ್ನು ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬೇಸತ್ತ ಭಾಗ್ಯ ಈ ಕೃತ್ಯ ಎಸಗಿದ್ದಾಳೆ ಎಂದು ಶಂಕಿಸಲಾಗಿದೆ. ಸದ್ಯ ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!