ಹಣ ಪೆಟ್ಚಿಗೆ ಹೊತ್ತೊಯ್ಯುತ್ತಿರುವ ಖದೀಮರು. 
ರಾಜ್ಯ

ಬೀದರ್: ATM ಹಣಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು; 93 ಲಕ್ಷ ರೂ ದರೋಡೆ; Video

ಬ್ಯಾಂಕ್ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಹಣದ ಸಮೇತ ದುಷ್ಕರ್ಮಿಗಳ ಪರಾರಿ

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಸ್​ಬಿಐ ಬ್ಯಾಂಕ್ ಎಟಿಎಂಗೆ ಹಣವನ್ನು ತುಂಬಿಸಲು ಭದ್ರತಾ​ ಸಿಬ್ಬಂದಿ CMS ಏಜೆನ್ಸಿಯ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಏಕಾಏಕಿ ಎಂಟು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು 93 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್​ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರನ್ನು ಗಿರಿ ವೆಂಕಟೇಶ್ ಮತ್ತು ಶಿವ ಕಾಶಿನಾಥ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು CMS ಏಜೆನ್ಸಿಯ ಸಿಬ್ಬಂದಿಯಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಾಜಿ ಪತ್ನಿ ಮಂಜು ವಾರಿಯರ್ ಹೇಳಿಕೆ ನಂತರ ನನ್ನ ವಿರುದ್ಧ ಪಿತೂರಿ: ನಟ ದಿಲೀಪ್

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

SCROLL FOR NEXT