ನಾಳೆ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಉದ್ಘಾಟನೆ: ತೇಜಸ್ವಿ ಸೂರ್ಯ
ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಬಿಜೆಪಿ ಸಂಸದ ಶ್ಲಾಘಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಬಹು ನಿರೀಕ್ಷಿತ ಅಮೆರಿಕ ರಾಯಭಾರ ಕಚೇರಿ ಜನವರಿ 17 ರಂದು ಉದ್ಘಾಟನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ ತಿಳಿಸಿದ್ದಾರೆ.
"ನನ್ನ ಪ್ರೀತಿಯ ಬೆಂಗಳೂರು, ಇದು ಅಧಿಕೃತ. ಜನವರಿ 17 ರಂದು ಅಮೆರಿಕ ರಾಯಭಾರ ಕಚೇರಿ ಉದ್ಘಾಟನೆಗೊಳ್ಳಲಿದೆ" ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಬಿಜೆಪಿ ಸಂಸದ ಶ್ಲಾಘಿಸಿದ್ದಾರೆ.
ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆ: ಜನವರಿಯಲ್ಲಿ ಕಾರ್ಯಾರಂಭ; ಐತಿಹಾಸಿಕ ಮೈಲಿಗಲ್ಲು- ತೇಜಸ್ವಿ ಸೂರ್ಯ
"ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಪ್ರಯತ್ನದಿಂದಾಗಿ ಸಾಧ್ಯವಾಯಿತು. ನಮ್ಮ ಮೈಸೂರು ಪಾಕ್ನೊಂದಿಗೆ ವಿದೇಶಾಂಗ ಸಚಿವರಿಗೆ ಧನ್ಯವಾದ ಹೇಳುತ್ತಿದ್ದೇನೆ" ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಇಲ್ಲಿಯವರೆಗೆ, ಅಮೆರಿಕ ವೀಸಾಕ್ಕಾಗಿ ಜನರು ಚೆನ್ನೈ ಅಥವಾ ಹೈದರಾಬಾದ್ಗೆ ಪ್ರಯಾಣಿಸುತ್ತಿದ್ದರು. ಇನ್ನುಮುಂದೆ ಬೆಂಗಳೂರಿನಲ್ಲಿಯೇ ಅಮೆರಿಕ ವೀಸಾ ದೊರೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.