ಕಾವೇರಿ ನೀರು  
ರಾಜ್ಯ

KRS ಡ್ಯಾಂನಿಂದ ಎಕ್ಸ್‌ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ ಕಾವೇರಿ ನೀರು ಸರಬರಾಜು

ಕೆಆರ್‌ಎಸ್ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಪೈಪ್‌ಲೈನ್ ಹಾಕಲು ರಾಜ್ಯ ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರ್ಜಾಪುರ, ಆನೇಕಲ್, ನೆಲಮಂಗಲದ ಕೆಲವು ಭಾಗಗಳು, ದೇವನಹಳ್ಳಿ ಮತ್ತು ಹೊಸಕೋಟೆಗೆ ನೀರು ಸರಬರಾಜು ಮಾಡಲು ಅನುವು ಮಾಡಿಕೊಡುತ್ತದೆ.

ಮೈಸೂರು: ಇತ್ತೀಚೆಗೆ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ನೀಡಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ 7 ಟಿಎಂಸಿ ಅಡಿ ನೀರು ಸರಬರಾಜು ಮಾಡಲು ಮುಂದಾಗಿದೆ. ಇದು ಗ್ರೇಟರ್ ಬೆಂಗಳೂರು ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಿದೆ.

ಕೆಆರ್‌ಎಸ್ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಪೈಪ್‌ಲೈನ್ ಹಾಕಲು ರಾಜ್ಯ ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರ್ಜಾಪುರ, ಆನೇಕಲ್, ನೆಲಮಂಗಲದ ಕೆಲವು ಭಾಗಗಳು, ದೇವನಹಳ್ಳಿ ಮತ್ತು ಹೊಸಕೋಟೆಗೆ ನೀರು ಸರಬರಾಜು ಮಾಡಲು ಅನುವು ಮಾಡಿಕೊಡುತ್ತದೆ ಮತ್ತು 50 ರಿಂದ 60 ಲಕ್ಷ ಜನಸಂಖ್ಯೆಗೆ ನೀರು ಪೂರೈಕೆ ಮಾಡಲಿದೆ.

ಅಂತರ್ಜಲ ಅಥವಾ ಟ್ಯಾಂಕರ್‌ಗಳು ಮಾತ್ರ ನೀರಿನ ಮೂಲವಾಗಿದ್ದ ಈ ಪ್ರದೇಶಗಳಲ್ಲಿ ವಾಸಿಸುವ ಲಕ್ಷಾಂತರ ಜನ ಕಾವೇರಿ ನೀರಿಗಾಗಿ ಕಾಯುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ತೀವ್ರ ಬರಗಾಲದ ಸಮಯದಲ್ಲಿ ಜನ ಸಂಪೂರ್ಣ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದರು. ಇದು ಭಾರತದ ಸಿಲಿಕಾನ್ ವ್ಯಾಲಿಯ ವರ್ಚಸ್ಸಿಗೆ ತೀವ್ರ ಹಾನಿಯನ್ನುಂಟುಮಾಡಿತು.

ಈ ಸಂಬಂಧ ಅಧಿಕಾರಿಗಳು ವಿವರವಾದ ಯೋಜನಾ ವರದಿ(ಡಿಪಿಆರ್)ಯನ್ನು ಸಿದ್ಧಪಡಿಸಿದ್ದಾರೆ. ಇದನ್ನು ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬಜೆಟ್‌ನಲ್ಲಿ ಇದನ್ನು ಘೋಷಿಸುವ ಸಾಧ್ಯತೆಯಿದೆ ಮತ್ತು ಅಂತರ್ಜಲ ಮಟ್ಟವನ್ನು ಬಳಸಿಕೊಳ್ಳುವ ಮತ್ತು ಟ್ಯಾಂಕರ್‌ಗಳನ್ನು ಅವಲಂಬಿಸಿರುವ ಈ ಪ್ರದೇಶಗಳ ನಿವಾಸಿಗಳ ಬೇಡಿಕೆ ಈಡೇರಲಿದೆ.

ಪ್ರಸ್ತಾವಿತ ಈ ಯೋಜನೆಯು ಬೆಂಗಳೂರಿಗೆ ಹೆಚ್ಚುವರಿ ನೀರನ್ನು ಪೂರೈಕೆ ಮಾಡುವುದಲ್ಲದೆ, ಮುಂದಿನ ಎರಡು ದಶಕಗಳ ಕಾಲ ಬೆಳೆಯುತ್ತಿರುವ ನಗರದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅದರ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.

ಕರ್ನಾಟಕಕ್ಕೆ ಕಾವೇರಿ ನದಿಯಿಂದ 284.75 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿರುವುದರಿಂದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೆಆರ್‌ಎಸ್‌ನ ಹೆಚ್ಚುವರಿ ನೀರನ್ನು ಬಳಸುತ್ತಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಚಿಂತನೆ ನಡೆಸಲಾಗಿದ್ದು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರದ ಬಹುಪಾಲು ಜನಸಂಖ್ಯೆಯನ್ನು ಇದು ಒಳಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮೀಣ ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT