ಎಸ್ ಜೈಶಂಕರ್ 
ರಾಜ್ಯ

ಶೀಘ್ರದಲ್ಲೇ ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಆರಂಭ: ಎಸ್ ಜೈಶಂಕರ್

ಸೆಪ್ಟೆಂಬರ್ 2023 ರಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಬೆಂಗಳೂರಿನಲ್ಲಿ ರಾಯಭಾರ ಕಚೇರಿ ಆರಂಭಿಸುವ ವಿಷಯ ಪ್ರಸ್ತಾಪಿಸಿದ್ದರು.

ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭಿಸುವ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿದ್ದು, ನಾವು ಶೀಘ್ರದಲ್ಲೇ ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಆರಂಭಿಸುತ್ತೇವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಶುಕ್ರವಾರ ಭರವಸೆ ನೀಡಿದರು.

ಇಂದು ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಜೈಶಂಕರ್‌ ಅವರು, ಬೆಂಗಳೂರಿನಲ್ಲಿ ನೂತನ ಅಮೆರಿಕ ದೂತಾವಾಸ ಕಚೇರಿ ಆರಂಭಗೊಂಡಿರುವುದು ಉಭಯ ದೇಶಗಳ ನಡುವಿನ ಸಂಬಂಧ ಸುಧಾರಣೆಗೆ ಹೊಸ ನಾಂದಿ ಹಾಡಲಿದೆ ಎಂದರು.

ಇದು ಅನೇಕರಿಗೆ ಪ್ರಯಾಣ ಮತ್ತು ವೀಸಾ ಪ್ರಕ್ರಿಯೆಗಳನ್ನು ಸುಲಭಗೊಳಿಸುತ್ತದೆ. ಈ ಬಹುನಿರೀಕ್ಷಿತ ಬೆಳವಣಿಗೆಯು ಬೆಂಗಳೂರಿನ ರೋಮಾಂಚಕ ಟೆಕ್ ಸಮುದಾಯದೊಂದಿಗೆ ಸಹಯೋಗವನ್ನು ಹೆಚ್ಚಿಸಲು ಭರವಸೆ ನೀಡುತ್ತದೆ ಎಂದರು.

"ಬಹಳ ದಿನಗಳಿಂದ ಅಮೆರಿಕ ರಾಯಭಾರ ಕಚೇರಿಗಾಗಿ ಬೆಂಗಳೂರಿಗರು ಕಾಯುತ್ತಿದ್ದರು. ಸೆಪ್ಟೆಂಬರ್ 2023 ರಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಬೆಂಗಳೂರಿನಲ್ಲಿ ರಾಯಭಾರ ಕಚೇರಿ ಆರಂಭಿಸುವ ವಿಷಯ ಪ್ರಸ್ತಾಪಿಸಿದ್ದರು. ಅಂತಿಮವಾಗಿ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ನಮ್ಮ ಬೇಡಿಕೆ ಈಡೇರಿಸಿದ್ದಾರೆ. ಆದ್ದರಿಂದ ನಾವು ಅವರ ತವರಾದ ಲಾಸ್ ಏಂಜಲೀಸ್‌ನಲ್ಲಿ ನಮ್ಮ ಕಾನ್ಸುಲೇಟ್‌ ಕಚೇರಿಯನ್ನು ತೆರೆಯುತ್ತೇವೆ ಎಂದು ಜೈಶಂಕರ್‌ ಹೇಳಿದರು.

ನಂತರ ಮಾತನಾಡಿದ ಎರಿಕ್ ಗಾರ್ಸೆಟ್ಟಿ ಅವರು, ಬೆಂಗಳೂರಿನ ಅಮೆರಿಕ ರಾಯಭಾರ ಕಚೇರಿಯು ಮೊದಲಿಗೆ ವೀಸಾ ಸೇವೆಗಳನ್ನು ನೀಡುವುದಿಲ್ಲ. ನಂತರ ದಿನಗಳಲ್ಲಿ ವೀಸಾ ಸೇವೆ ಆರಂಬಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!