ಡಾ.ಕೆ ಗೋವಿಂದರಾಜ್ 
ರಾಜ್ಯ

ಕಂಠೀರವ ಕ್ರೀಡಾಂಗಣದಲ್ಲಿ ಇಂದಿನಿಂದ ಜನವರಿ 19 ರವರೆಗೆ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಚಾಂಪಿಯನ್‍ಶಿಪ್ ಪಂದ್ಯಾವಳಿ

ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಚಾಂಪಿಯನ್ ಶಿಪ್‍ಗಳಲ್ಲಿ ಬೆಂಗಳೂರು ಗಮನಾರ್ಹ ಪಾತ್ರ ವಹಿಸುತ್ತದೆ. ಕ್ರೀಡಾ ತಾಣವಾಗಿ ಬೆಂಗಳೂರಿನ ಖ್ಯಾತಿ, ಗೌರವಗಳು ಹೆಚ್ಚುತ್ತಿರುವುದು ಕೂಡ ಅಂತಾರಾಷ್ಟ್ರೀಯ ಆಟಗಾರರು ಮತ್ತು ತಂಡಗಳನ್ನು ಆಕರ್ಷಿಸುತ್ತದೆ.

ಬೆಂಗಳೂರು : ನಗರದ ಕಂಠೀರವ ಕ್ರೀಡಾಂಗಣದಲ್ಲಿ ಇಂದಿನಿಂದ(ಜ.17) ಜ.19ರ ವರೆಗೆ ಬಾಸ್ಕೆಟ್‍ಬಾಲ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ 4ನೇ ಸೀನಿಯರ್ 3x3 ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಚಾಂಪಿಯನ್‍ಶಿಪ್ ಪಂದ್ಯಾವಳಿ ನಡೆಯಲಿದೆ ಎಂದು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್‍ಗಳ ಅಧ್ಯಕ್ಷ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ತಿಳಿಸಿದ್ದಾರೆ.

ಕರ್ನಾಟಕ ಒಲಿಂಪಿಕ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಭಾರತದ ಎಲ್ಲೆಡೆಯಿಂದ 56 (30 ಪುರುಷರ ಮತ್ತು 26 ಮಹಿಳೆಯರ) ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಇವುಗಳಲ್ಲಿ ಪುರುಷರ ಮತ್ತು ಮಹಿಳೆಯರ ರೈಲ್ವೇಸ್ ತಂಡಗಳು, ಪುರುಷರ ವಿಭಾಗದಲ್ಲಿ ಸರ್ವೀಸಸ್ ತಂಡ ಸೇರಿವೆ ಎಂದರು.ವಿವಿಧ ರಾಜ್ಯಗಳ 250 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಲಿವೆ.

ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಚಾಂಪಿಯನ್ ಶಿಪ್‍ಗಳಲ್ಲಿ ಬೆಂಗಳೂರು ಗಮನಾರ್ಹ ಪಾತ್ರ ವಹಿಸುತ್ತದೆ. ಕ್ರೀಡಾ ತಾಣವಾಗಿ ಬೆಂಗಳೂರಿನ ಖ್ಯಾತಿ, ಗೌರವಗಳು ಹೆಚ್ಚುತ್ತಿರುವುದು ಕೂಡ ಅಂತಾರಾಷ್ಟ್ರೀಯ ಆಟಗಾರರು ಮತ್ತು ತಂಡಗಳನ್ನು ಆಕರ್ಷಿಸುತ್ತದೆಯಲ್ಲದೇ ಇದರೊಂದಿಗೆ ಭಾರತದಲ್ಲಿ ಬಾಸ್ಕೆಟ್‍ಬಾಲ್‍ನ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಡಾ.ಕೆ.ಗೋವಿಂದರಾಜ್ ಹೇಳಿದರು.

ಈ ಚಾಂಪಿಯನ್‍ಶಿಪ್‍ಗಳನ್ನು ನಿರಂತರವಾಗಿ ಆಯೋಜಿಸುವುದು ಮತ್ತು ಬೆಂಬಲಿಸುವುದರಿಂದ, ನಾವು ಕೇವಲ ಬಾಸ್ಕೆಟ್‍ಬಾಲ್‍ಗೆ ಪ್ರೋತ್ಸಾಹ ನೀಡುವುದು ಮಾತ್ರವಲ್ಲದೇ, ಕ್ರೀಡಾಪಟುಗಳನ್ನು ಪೋಷಿಸುತ್ತೇವೆ. ಜೊತೆಗೆ ಭಾರತದಲ್ಲಿ ಬಾಸ್ಕೆಟ್‍ಬಾಲ್ ಪರಿಸರ ವ್ಯವಸ್ಥೆಯನ್ನು ದೃಢಪಡಿಸುತ್ತೇವೆ ಎಂದು ಡಾ.ಕೆ.ಗೋವಿಂದರಾಜ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT