ಸಿಎಂ ಸಿದ್ದರಾಮಯ್ಯ 
ರಾಜ್ಯ

ಮಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಅವಶ್ಯಕತೆಯಿದೆ: ಸಿಎಂ ಸಿದ್ದರಾಮಯ್ಯ

ಮಂಗಳೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕು ಮತ್ತು ಸರ್ಕಾರವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ" ಎಂದು ಸಿಎಂ ತಿಳಿಸಿದರು.

ಮಂಗಳೂರು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಮಂಗಳೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮಂಗಳೂರಿನ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ(RGUHS) ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ನಾನು 1994-99ರಲ್ಲಿ ಹಣಕಾಸು ಸಚಿವನಾಗಿದ್ದಾಗ, ಪ್ರತಿ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜು, ಸರ್ಕಾರಿ ಆಸ್ಪತ್ರೆ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆ ಇರಬೇಕು ಎಂದು ಘೋಷಿಸಿದ್ದೆ. ಆದರೆ ಇಲ್ಲಿಯವರೆಗೂ ನಾವು ಅದನ್ನು ಪೂರೈಸಲು ಸಾಧ್ಯವಾಗಿಲ್ಲ ಎಂದರು.

ಮಂಗಳೂರು ವೈದ್ಯಕೀಯ ಕೇಂದ್ರವಾಗಿದ್ದು, ಜನರು ಗುಣಮಟ್ಟದ ಆರೋಗ್ಯ ಸೇವೆ ಪಡೆಯುತ್ತಿರುವ ಅನೇಕ ಖಾಸಗಿ ಆಸ್ಪತ್ರೆಗಳಿವೆ. ಆದರೆ ಮಂಗಳೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಹ ವೈದ್ಯರಾಗಲು ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕು ಮತ್ತು ಸರ್ಕಾರವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ" ಎಂದು ಸಿಎಂ ತಿಳಿಸಿದರು.

ಬಡ ಕುಟುಂಬಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಚಿಕಿತ್ಸೆಗಾಗಿ 30 ಲಕ್ಷ ರೂ.ಗಳವರೆಗೆ ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದಾರೆ. "ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ವ್ಯವಸ್ಥೆ ಮಾಡಲು ಹೇಗೆ ಸಾಧ್ಯ? ಆದ್ದರಿಂದ, ಎಲ್ಲಾ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಒದಗಿಸುವಂತೆ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ವೈದ್ಯಕೀಯ ಶುಲ್ಕವನ್ನು ನಿಗದಿಪಡಿಸುವಂತೆ ನಾವು ಜಯದೇವ ಆಸ್ಪತ್ರೆ ಸೇರಿದಂತೆ ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಡ ರೋಗಿಗಳಿಗೆ ಮೂತ್ರಪಿಂಡ ಮತ್ತು ಯಕೃತ್ತು ಕಸಿ ಮಾಡಿಸಲು ಸಹಾಯ ಮಾಡುವಂತೆ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇನ್ನೂ 5000 ಕ್ಕೂ ಹೆಚ್ಚು ರೋಗಿಗಳು ಮೂತ್ರಪಿಂಡ ಕಸಿಗಾಗಿ ಕಾಯುತ್ತಿದ್ದಾರೆ ಎಂದು ಅವರು ಹೇಳಿದರು.

"ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಾದೇಶಿಕ ಕೌಶಲ್ಯ ಮತ್ತು ಸಂಶೋಧನಾ ಕೇಂದ್ರವನ್ನು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಮಂಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಈ ಕೇಂದ್ರಗಳು ಸ್ಥಾಪನೆಯಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಕೆಲಸಕ್ಕಾಗಿ ಬೆಂಗಳೂರಿಗೆ ಹೋಗುವ ಅಗತ್ಯವಿಲ್ಲ. ಪ್ರಾದೇಶಿಕ ಕೇಂದ್ರಗಳು ಸಹಾಯ ಮಾಡುತ್ತವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT