ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಬೆಳಗಾವಿ: ಆಸ್ಪತ್ರೆಗೆ ತೆರಳಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮೂಳೆ ತಜ್ಞ ಡಾ. ರವಿ ಪಾಟೀಲ್ ಅವರು ವಿವರಿಸಿದರು ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಇತ್ತೀಚೆಗೆ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಇದ್ದರು.

ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮೂಳೆ ತಜ್ಞ ಡಾ. ರವಿ ಪಾಟೀಲ್ ಅವರು ವಿವರಿಸಿದರು ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು. ಕೆಲವೇ ದಿನಗಳಲ್ಲಿ ಸಚಿವೆ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು ಎಂದು ಹೇಳಿದರು.

ಇದೇ ವೇಳೆ ಜನವರಿ 21 ರಂದು ನಡೆಯಲಿರುವ ``ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್'' ಎಂಬ ಕಾಂಗ್ರೆಸ್ ಬೃಹತ್ ರ್ಯಾಲಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಬಿಜೆಪಿ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇದು ಸಾರ್ವಜನಿಕ ಕಾರ್ಯಕ್ರಮವಾಗಿದ್ದು, ಎಲ್ಲರೂ ಇದರಲ್ಲಿ ಭಾಗವಹಿಸಲು ಸ್ವತಂತ್ರರು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್