ಗೃಹ ಸಚಿವ ಜಿ ಪರಮೇಶ್ವರ 
ರಾಜ್ಯ

ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ಆರೋಪಕ್ಕೆ ಗೃಹ ಸಚಿವ ಜಿ ಪರಮೇಶ್ವರ ತಿರುಗೇಟು

ನಾವು ಬಿಜೆಪಿ ಆಢಳಿತಾವಧಿಯಲ್ಲಿ ಸಂಭವಿಸಿದ ಘಟನೆಗಳ ಡೇಟಾವನ್ನು ಬಿಡುಗಡೆ ಮಾಡುತ್ತೇವೆ. ಬಿಜೆಪಿ ಇದೀಗ ಎಲ್ಲವನ್ನೂ ಮರೆತಂತಿದೆ' ಎಂದರು.

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಅವರು ತಳ್ಳಿಹಾಕಿದರು. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿವೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಅವರು, ಈ ಆರೋಪಗಳು ಆಧಾರರಹಿತ ಎಂದು ಕರೆದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ. ಪದೇ ಪದೆ ದರೋಡೆ, ಕೊಲೆಗಳು ನಡೆಯುತ್ತಿವೆ ಎಂಬ ಆರೋಪ ನಿರಾಧಾರ, ಇಂತಹ ಘಟನೆಗಳು ನಡೆಯಲು ಬಿಡುವುದಿಲ್ಲ ಎಂದು ಹೇಳಿದರು.

ಮಂಗಳೂರು ನಗರದ ಉಳ್ಳಾಲ ವಲಯದ ಸಹಕಾರಿ ಬ್ಯಾಂಕ್‌ನಲ್ಲಿ ಶುಕ್ರವಾರ ಬೆಳಗ್ಗೆ ಶಸ್ತ್ರಸಜ್ಜಿತ ತಂಡವೊಂದು ಕೋಟ್ಯಂತರ ರೂ. ಮೌಲ್ಯದ ನಗದು ಮತ್ತು ಚಿನ್ನವನ್ನು ದೋಚಿದೆ. ಎರಡು ದಿನಗಳಲ್ಲಿ ಕರ್ನಾಟಕದಲ್ಲಿ ನಡೆದ ಎರಡನೇ ದೊಡ್ಡ ಬ್ಯಾಂಕ್ ದರೋಡೆ ಇದಾಗಿದೆ.

'ಬ್ಯಾಂಕ್ ದರೋಡೆ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಸಣ್ಣಪುಟ್ಟ ಲೋಪಗಳಿಂದ ಕೆಲವು ಘಟನೆಗಳು ಸಂಭವಿಸಿವೆ. ಆದರೆ, ಇದರಿಂದ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳುವುದು ಸರಿಯಲ್ಲ. ನಾವು ಬಿಜೆಪಿ ಆಢಳಿತಾವಧಿಯಲ್ಲಿ ಸಂಭವಿಸಿದ ಘಟನೆಗಳ ಡೇಟಾವನ್ನು ಬಿಡುಗಡೆ ಮಾಡುತ್ತೇವೆ. ಬಿಜೆಪಿ ಇದೀಗ ಎಲ್ಲವನ್ನೂ ಮರೆತಂತಿದೆ' ಎಂದರು.

ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಕುರಿತು ಮಾತನಾಡಿದ ಪರಮೇಶ್ವರ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಆ ಐತಿಹಾಸಿಕ ಘಟನೆಯನ್ನು ಸ್ಮರಿಸಲು ನಾವು ಈ ಶತಮಾನೋತ್ಸವವನ್ನು ಆಯೋಜಿಸುತ್ತಿದ್ದೇವೆ ಎಂದರು.

'ನಾವು 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ರ್ಯಾಲಿಯನ್ನು ಸಹ ಯೋಜಿಸಿದ್ದೇವೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷವು ಶ್ರೀಮಂತ ಮತ್ತು ಅನನ್ಯ ಇತಿಹಾಸವನ್ನು ಹೊಂದಿದೆ. ಬೇರೆ ಯಾವುದೇ ಪಕ್ಷಗಳಿಗೆ ಸಾಟಿಯಿಲ್ಲದ ಪರಂಪರೆಯನ್ನು ಹೊಂದಿದೆ. ನಾವೆಲ್ಲರೂ ಬೆಳಗಾವಿಯಲ್ಲಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ದೇವರ ಮೊರೆ ಹೋದ ಡಿಕೆಶಿ ಬೆಂಬಲಿಗರು: ಅಯ್ಯಪ್ಪ ಮಾಲಾಧಾರಿಗಳ ವಿಶೇಷ ಪೂಜೆ; ಗಣಪತಿ ದೇವಾಲಯಲ್ಲಿ ಈಡುಗಾಯಿ ಸೇವೆ!

SCROLL FOR NEXT