ಶಿವರಾಜ್ ಸಿಂಗ್ ಚೌಹ್ಹಾಣ್ ಅವರೊಂದಿಗೆ ರಾಜ್ಯದ ಸಚಿವರಾದ ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ ಮತ್ತಿತರರು 
ರಾಜ್ಯ

ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ತೆರಿಗೆ ಪಾಲು ಹಂಚಿಕೆಯಲ್ಲಿ ತಾರತಮ್ಯ ಸಲ್ಲದು: ಕೇಂದ್ರಕ್ಕೆ ರಾಜ್ಯ ಸರ್ಕಾರ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ನಂತರ ಬೈರೇಗೌಡ ಅವರು ಕರ್ನಾಟಕಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚುವುದರಲ್ಲಿ ಕರ್ನಾಟಕಕ್ಕೆ ನ್ಯಾಯವಾದ ಪಾಲು ನೀಡುತ್ತಿಲ್ಲ. ರಾಜಕೀಯ ಕಾರಣಗಳಿಗಾಗಿ ಅನುದಾನವನ್ನು ಕಡಿತಗೊಳಿಸುವುದು ಸರಿಯಲ್ಲ. ಅನುದಾನ ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರಕಾರ ಇದನ್ನು ಸರಿಪಡಿಸಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ನಂತರ ಬೈರೇಗೌಡ ಅವರು ಕರ್ನಾಟಕಕ್ಕೆ ನ್ಯಾಯಯುತವಾದ ಅನುದಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ನಮ್ಮ ಪಾಲಿನ ಹಣವನ್ನೇಕೆ ನೀಡಲಾಗುತ್ತಿಲ್ಲ? ರಾಜ್ಯಕ್ಕಾಗಿ ಹಣ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ನಾವು ಮಾಡಿದ ಕೆಲಸನ್ನು ಆಧರಿಸಿ, ಯಾವುದೇ ವಿಳಂಬ ಮಾಡದೆ ಕಂದ್ರ ಸರ್ಕಾರ ನಮಗೆ ನ್ಯಾಯಯುತ ಅನುದಾನ ನೀಡುಬೇಕೆಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಕೇಂದ್ರ ಸರ್ಕಾರ ಯಾವುದೇ ವಿಳಂಬವಿಲ್ಲದೆ ಹಣ ನೀಡಲಿದೆ. ರಾಜ್ಯ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಹೆಚ್ಚುವರಿ ಸಂಪನ್ಮೂಲಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ವಿ, ಅನುದಾನವನ್ನೂ ಕೊಟ್ಟಿದ್ವಿ. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ. ಇದಕ್ಕಾಗಿ ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ‌ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ಇಂದು ಅಡಿಕೆ ಬೆಳಗಾರರ ಸಮಸ್ಯೆಗಳ ಪರಿಹಾರಕ್ಕೆ ಅನುದಾನ ಕೋರಲಾಗಿದೆ. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ 97 ಕೋಟಿ ರೂ ಬಿಡುಗಡೆ ಮಾಡುತ್ತಿದ್ದೇವೆ. ಮೂರೂ ಸಚಿವರೂ ಒಂದಷ್ಟು ಬೇಡಿಕೆ ಕೊಟ್ಟಿದ್ದಾರೆ, ಅದನ್ನೂ ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ತಿಳಿಸಿದರು.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಮತ್ತೆ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು, ಈ ಪಕ್ಷಪಾತವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕೇಂದ್ರದ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರದ ಬಿಜೆಪಿ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ 7 ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT