ಸಂಗ್ರಹ ಚಿತ್ರ 
ರಾಜ್ಯ

ದಿನೇಶ್ ಗುಂಡೂರಾವ್, ಹ್ಯಾರಿಸ್ ಬೆಂಬಲಿಗರಿಂದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ: ಕ್ರಮಕ್ಕೆ JDS ಆಗ್ರಹ

ರಾಜಕೀಯ ಮುಖಂಡರ ಬೆಂಬಲಿಗರು ಜಾಹೀರಾತು ಫಲಕ, ಕಟೌಟ್, ಬ್ಯಾನರ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎನ್‌ಎ ಹ್ಯಾರೀಸ್ ಅವರ ಬೆಂಬಲಿಗರು ಅಳವಡಿಸಿರುವ ಅಕ್ರಮ ಬ್ಯಾನರ್ ಮತ್ತು ಫ್ಲೆಕ್ಸ್‌ಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಸೌಂದರ್ಯ ಹಾಳಾಗುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗ ಜೆಡಿಎಸ್ ಆಗ್ರಹಿಸಿದೆ.

ಹುಟ್ಟುಹಬ್ಬ, ಹೊಸ ವರ್ಷಾಚರಣೆ, ಸಂಕ್ರಾಂತಿ ಮುಂತಾದ ಸಂದರ್ಭಗಳಲ್ಲಿ ರಾಜಕೀಯ ಮುಖಂಡರ ಬೆಂಬಲಿಗರು ಜಾಹೀರಾತು ಫಲಕ, ಕಟೌಟ್, ಬ್ಯಾನರ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ.

ಈ ಅಕ್ರಮಗಳ ಬಗ್ಗೆ ಅರಿವಿದ್ದರೂ ಬಿಬಿಎಂಪಿ ಅಧಿಕಾರಿಗಳು ಕ್ರಮಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ, ಅಕ್ರಮ ಫ್ಲಕ್ಸ್-ಬ್ಯಾನರ್ ಹಾಕುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಪಾಲಿಕೆಯ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಮಾಧ್ಯಮಗಳ ಮುಂದಿನ ಸ್ಟಂಟ್‌ ಎನಿಸುತ್ತಿದೆ. 8 ವಲಯಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯ ರಾಜಕಾರಣಿಗಳಿಗೆ ಬೆಂಬಲ ನೀಡುತ್ತಿದ್ದು, ಆಡಳಿತಾರೂಢ ಸರಕಾರ ದೊಡ್ಡ ಮಟ್ಟದಲ್ಲಿ ಬ್ಯಾನರ್ ಅಳವಡಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

2018ರ ಆಗಸ್ಟ್‌ನಲ್ಲಿ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT