ಬಿಎಂಟಿಸಿ ಬಸ್ 
ರಾಜ್ಯ

ಬ್ರೇಕ್ ಫೇಲ್: ಬೀಡಾ ಅಂಗಡಿಗೆ ಗುದ್ದಿದ BMTC ಬಸ್, ತಪ್ಪಿದ ದೊಡ್ಡ ಅನಾಹುತ

ಬಿಡದಿ ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ.

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ನಾಗದೇವನಹಳ್ಳಿ ರಸ್ತೆಯಲ್ಲಿ ಭಾನುವಾರ ನಡೆದಿದೆ.

ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅವಘಡದಿಂದ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಿಡದಿ ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಗೇರಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಸ್ಸನ್ನು ರಸ್ತೆಯಿಂದ ತೆರವುಗೊಳಿಸಿದರು. ಢಾಬಾ ಮಾಲೀಕರ ದೂರಿನ ಆಧಾರದ ಮೇಲೆ ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!