ಕಾರ್ಯಕ್ರಮದಲ್ಲಿ ರಾಧಿಕಾ ವೇಮುಲ ಮತ್ತಿತರರು 
ರಾಜ್ಯ

ಜಾತಿ ತಾರತಮ್ಯ ತಡೆಗೆ ಕಾನೂನಿನ ಅಗತ್ಯವಿದೆ: ಹೋರಾಟಗಾರರು

ರೋಹಿತ್ ಅವರ ತಾಯಿ ಮತ್ತು ಜಾತಿ ವಿರೋಧಿ ಹೋರಾಟಗಾರ್ತಿ ರಾಧಿಕಾ ವೇಮುಲ ಅವರು ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿದ್ದರು.

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಗಾಗಿ ರೋಹಿತ್ ಕಾಯ್ದೆಗಾಗಿ ಜನಾಂದೋಲನ ಸಮಾಲೋಚನ ಸಭೆ ನಗರದ ಸೆಂಟ್ ಜೋಸೆಫ್ ಕಾನೂನು ಕಾಲೇಜಿನಲ್ಲಿ ಭಾನುವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ವಿರುದ್ಧ ಕಾನೂನಿನ ಅವಶ್ಯವಿದ್ದು, ಸಮಾನ ಹಾಗೂ ಒಳಗೊಳ್ಳುವ ಶಿಕ್ಷಣಕ್ಕಾಗಿ ದೇಶಾದ್ಯಂತ 'ರೋಹಿತ್ ಕಾಯ್ದೆ' ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು.

ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಅವರು ಜಾತಿ ಆಧಾರಿತ ತಾರತಮ್ಯ ಮತ್ತು ಸಾಂಸ್ಥಿಕ ಕಿರುಕುಳದಿಂದ ಬೇಸತ್ತು 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅವರ ಸಾವು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಉನ್ನತ ಶಿಕ್ಷಣದಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ತಾರತಮ್ಯವನ್ನು ಎತ್ತಿ ತೋರಿಸಿತ್ತು.

ಪ್ರಸ್ತಾವಿತ 'ರೋಹಿತ್ ಕಾಯ್ದೆ' ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದ್ದು, ದುರ್ಬಲ ಸಮುದಾಯಗಳಿಗೆ ಶಿಕ್ಷಣಕ್ಕೆ ಸಮಾನ ಪ್ರವೇಶವನ್ನು ಖಾತ್ರಿಪಡಿಸುತ್ತದೆ.

ರೋಹಿತ್ ಅವರ ತಾಯಿ ಮತ್ತು ಜಾತಿ ವಿರೋಧಿ ಹೋರಾಟಗಾರ್ತಿ ರಾಧಿಕಾ ವೇಮುಲ ಅವರು ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿದ್ದರು. ತನ್ನ ಮಗನನ್ನು ಚುರುಕಾದ ಯುವಕ ಎಂದು ನೆನಪಿಸಿಕೊಂಡ ಅವರು, “ದಲಿತ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಪ್ರತಿ ಹಂತದಲ್ಲೂ ಸಾಂಸ್ಥಿಕವಾಗಿ ತಾರತಮ್ಯಕ್ಕೆ ಒಳಗಾಗುತ್ತಾರೆ. ನಾನು ಅನುಭವಿಸಿದ ನೋವನ್ನು ಬೇರೆ ಯಾವ ತಾಯಿಯೂ ಅನುಭವಿಸಲು ಬಯಸುವುದಿಲ್ಲ. ಈ ಹೋರಾಟ ಕೇವಲ ನ್ಯಾಯಕ್ಕಾಗಿ ಅಲ್ಲ, ಜಾತಿ ವಿರೋಧಿ ಪ್ರಜ್ಞೆ ಮೂಡಿಸಲು ಎಂದರು. ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಬೆಂಗಳೂರಿನ ಐಐಎಂ ಪ್ರೊಫೆಸರ್ ಗೋಪಾಲ್ ದಾಸ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಮುಖಂಡ ಮಾವಳ್ಳಿ ಶಂಕರ್, ಕೇಂದ್ರ ಸರ್ಕಾರವು ಮೂಲಭೂತ ಹಕ್ಕುಗಳ ಹೋರಾಟಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT