ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಬೆಳಗಾವಿ: ಸುವರ್ಣ ಸೌಧದ ಮುಂದೆ ಖರ್ಗೆಯಿಂದ ಗಾಂಧೀಜಿ ಪ್ರತಿಮೆ ಅನಾವರಣ

25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು.

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು.

25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ‌. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅನಾರೋಗ್ಯದಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಇತ್ತ ಸುವರ್ಣಸೌಧದ ಮುಂಭಾಗದಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಬಳಿಕ ಮಾತನಾಡಿದ ಖರ್ಗೆ, ನನ್ನ ಜೀವನವೇ ನನ್ನ ಸಂದೇಶ ಎಂದು ಸಾರುವ ಗಾಂಧೀಜಿ ಮೂರ್ತಿ ಇಡೀ ದೇಶಕ್ಕೆ ಗೌರವ. ಇಡೀ ಜಗತ್ತು ಗಾಂಧೀಜಿ ಅವರನ್ನು ಗೌರವಿಸುತ್ತದೆ. ಬೆಳಗಾವಿ ಇಡೀ ದೇಶಕ್ಕೆ ಗೌರವ ತಂದುಕೊಡುವ ಸ್ಥಳ. ಯಾಕೆಂದರೆ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಅಂತಹ ಮಹಾತ್ಮನ ಪುತ್ಥಳಿ ಉದ್ಘಾಟನೆ ನನ್ನ ಕೈಯಿಂದ ಆಗಿದ್ದಕ್ಕೆ ನನ್ನ ಜೀವನ ಧನ್ಯವಾಯಿತು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಮ ಭಕ್ತರಾಗಿದ್ದ, ಶುದ್ಧ‌ಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ. ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿ ಆಗಿದೆ ಎಂದು ಟೀಕಿಸಿದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT