ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೆ.ಆರ್ ಮಾರುಕಟ್ಟೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಹಲವು ವರ್ಷಗಳಿ ಹಿಂದೆಯೇ ಕುಟುಂಬದಿಂದ ದೂರವಾಗಿರುವ ಇಬ್ಬರು ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಸಂಗ್ರಹ ಚಿತ್ರ
Manjula VN
Updated On : 22 Jan 2025, 8:52 am

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ 37 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಗಣೇಶ್ (23) ಮತ್ತು ಶರವಣ (35) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಿರುವುದಾಗಿ ತಿಳಿದುಬಂದಿದೆ.

ಜ.19ರಂದು ರಾತ್ರಿ ಸುಮಾರು 11.30ಕ್ಕೆ ಕೆ.ಆರ್.ಮಾರುಕಟ್ಟೆ ಗೋಡೌನ್ ಸ್ಟ್ರೀಟ್ ನಲ್ಲಿ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಹಾಗೂ ಮೊಬೈಲ್ ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

Advertisement

Advertisement

ಹಲವು ವರ್ಷಗಳಿ ಹಿಂದೆಯೇ ಕುಟುಂಬದಿಂದ ದೂರವಾಗಿರುವ ಇಬ್ಬರು ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಮಾರುಕಟ್ಟೆಯಲ್ಲಿಯೇ ಖಾಲಿ ಜಾಗಗಳಲ್ಲಿ ಮಲಗುತ್ತಿದ್ದರು ಎಂದು ತಿಳಿದುಬಂದಿದೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ತಾಂತ್ರಿಕ ಸಾಕ್ಷ್ಯಗಳನ್ನು ವಿಶ್ಲೇಷಿಸಿದ ನಂತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಇನ್ನು ಆರೋಪಿಗಳನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು, ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Also Read

ಕೆಆರ್ ಮಾರ್ಕೆಟ್ ಬಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್; ಆಭರಣ, ಮೊಬೈಲ್ ಕಸಿದುಕೊಂಡು ದುಷ್ಕರ್ಮಿಗಳು ಪರಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments