ಸಂಗ್ರಹ ಚಿತ್ರ 
ರಾಜ್ಯ

ಶಾಪಿಂಗ್'ಗೆ ಕರೆದೊಯ್ಯಲಿಲ್ಲವೆಂದು ಬಾಲಕಿ ಆತ್ಮಹತ್ಯೆ: ಪೊಲೀಸರಿಗೆ ಮಾಹಿತಿ ನೀಡದೆ ಅಂತ್ಯ ಸಂಸ್ಕಾರ, ಸಂಕಷ್ಟದಲ್ಲಿ ಪೋಷಕರು

ಮಾಗಡಿ ತಾಲೂಕಿನ ಸೋಲೂರಿನ ಬಸವನಹಳ್ಳಿ ನಿವಾಸಿ ಧೃತಿ ಜಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಶನಿವಾರ ಸಂಜೆ 4 ರಿಂದ 5 ಗಂಟೆಯ ನಡುವೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು: ಶಾಪಿಂಗ್'ಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಈ ನಡುವೆ ಆತ್ಮಹತ್ಯೆ ವಿಚಾರ ಪೊಲೀಸರಿಗೆ ತಿಳಿಸದೆ ಅಂತ್ಯಸಂಸ್ಕಾರ ನೆರವೇರಿಸಿದ ಪೋಷಕರು ಸಂಕಷ್ಟಕ್ಕೆ ಸಿಲುಕಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಮಾಗಡಿ ತಾಲೂಕಿನ ಸೋಲೂರಿನ ಬಸವನಹಳ್ಳಿ ನಿವಾಸಿ ಧೃತಿ ಜಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಶನಿವಾರ ಸಂಜೆ 4 ರಿಂದ 5 ಗಂಟೆಯ ನಡುವೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕೃಷಿಕರಾದ ಆಕೆಯ ತಂದೆ ಗಂಗಾಧರಯ್ಯ ಮತ್ತು ತಾಯಿ ಸಂಬಂಧಿಕರ ಮದುವೆಗೆಂದು ಶಾಪಿಂಗ್'ಗೆ ಹೋಗಿದ್ದರು. ದಂಪತಿಗೆ ದೃತಿ ಒಬ್ಬಳೇ ಮಗಳಿದ್ದು, ಈಕೆ ಪಿಯುಸಿ ಓದುತ್ತಿದ್ದಳು. ತನ್ನನ್ನು ಶಾಂಪಿಂಗ್'ಗೆ ಕರೆದುಕೊಂಡು ಹೋಗದ್ದಕ್ಕೆ ಬೇಸರಗೊಂಡಿದ್ದಳು. ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ಕಾಲೇಜಿನಿಂದ ಮನೆಗೆ ಬಂದಿರುವ ಆಕೆ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ನಡುವೆ ಸಂಜೆ 5 ಗಂಟೆ ಸುಮಾರಿಗೆ ವಾಪಸ್ಸಾದ ಪೋಷಕರು, ಮನೆ ಬಾಗಿಲು ಬಡಿದಿದ್ದು, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಬಾಗಿಲು ಹೊಡೆದು ಒಳ ಹೋದಾಗ ಮಗಳು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ. ಪರೀಕ್ಷೆ ಕಾರಣದಿಂದ ಮಗಳನ್ನು ಶಾಪಿಂಗ್'ಗೆ ಕರೆದೊಯ್ದಿರಲಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಮಾಡಿಸಿದೆ, ದೇಹವನ್ನು ತುಂಡಾಗಿಸುತ್ತಾರೆಂಬ ಭಯದಿಂದ ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಈ ನಡುವೆ ಕುದೂರು ಠಾಣೆಯ ಹೆಡ್‌ಕಾನ್ಸ್‌ಟೇಬಲ್ ನಾಗರಾಜು ಅವರಿಗೆ ಸಂಜೆ ವೇಳೆಗೆ ವಿಷಯ ತಿಳಿದುಬಂದಿದ್ದು, ಇದೀಗ ಪೋಷಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಈ ಸಂಬಂಧ ಬಿಎನ್‌ಎಸ್‌ನ ಸೆಕ್ಷನ್ 211 ರ ಅಡಿಯಲ್ಲಿ ಪೊಲೀಸರಿಗೆ ಮಾಹಿತಿ ನೀಡದಿದ್ದಕ್ಕಾಗಿ ದಂಪತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

'ಲೋಕಸಭೆಯಲ್ಲಿ ನಾನು ಮಾತನಾಡದಂತೆ ಹಲವು ಬಾರಿ ತಡೆದರು': ರಾಹುಲ್ ಗಾಂಧಿ

ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ವಿಮಾನದ ಚಕ್ರಗಳು: ಫುಕೆಟ್ ವಿಮಾನ ನಿಲ್ದಾಣ ತಾತ್ಕಾಲಿಕವಾಗಿ ಬಂದ್!

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

SCROLL FOR NEXT