ಸುದೀಪ್, ಅನುಪಮ ಗೌಡ 
ರಾಜ್ಯ

2019 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮ ಗೌಡ ಅತ್ಯುತ್ತಮ ನಟ, ನಟಿ ಗೌರವ

ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ 'ಮೋಹನದಾಸ' ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್, ಅಘ್ಯಂ ಕ್ರಮವಾಗಿ ಎರಡನೇ ಹಾಗೂ ಮೂರನೇ ಅತ್ಯುತ್ತಮ ಚಿತ್ರವಾಗಿವೆ.

ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. 'ಪೈಲ್ವಾನ್' ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ 'ತ್ರಯಂಬಕಂನ ' ಅಮೋಘ ನಟನೆಗಾಗಿ ಅನುಪಮ ಗೌಡ 'ಅತ್ಯುತ್ತಮ ನಟಿ' ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ 'ಮೋಹನದಾಸ' ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್, ಅಘ್ಯಂ ಕ್ರಮವಾಗಿ ಎರಡನೇ ಹಾಗೂ ಮೂರನೇ ಅತ್ಯುತ್ತಮ ಚಿತ್ರವಾಗಿವೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅಭಿನಯದ 'ಲವ್ ಮಾಕ್ಟೆಲ್' ಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಬಂದಿದೆ. ಇದೇ ಚಿತ್ರದ ರಘು ದೀಕ್ಷಿತ್ ಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಒಲಿದು ಬಂದಿದೆ.

ಇನ್ನೂ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಕ ಇಂಡಿಯಾ vs ಇಂಗ್ಲೆಂಡ್ ಅತ್ಯುತ್ತಮ ಜನಪ್ರಿಯ ಮನೋರಂಜನಾ ಚಿತ್ರವಾಗಿದೆ. ಕನ್ನೇರಿ ಅತ್ಯುತ್ತಮ ಸಾಮಾಜಿಕ ಕಾಳಜಿಯ ಚಿತ್ರವಾಗಿದೆ. ದರ್ಶನ್ ಅಭಿನಯದ ಯಜಮಾನ ಚಿತ್ರದ ಸಂಗೀತ ಸಂಯೋಜನೆಗೆ ವಿ. ಹರಿಕೃಷ್ಣ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದರೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ನಂತರದ ವರ್ಷಗಳಲ್ಲಿ ಕೋವಿಡ್ ಕಾರಣಗಳಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿರಲಿಲ್ಲ. ಮಾರ್ಚ್ 2024 ರಂದು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ವೇಳೆಯಲ್ಲಿ 2019ರ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಪರೇಷನ್ ಸಿಂಧೂರ' ವೇಳೆ ಭಾರತ 'ಇನ್ನಷ್ಟು ಹಾನಿ ಮಾಡಬಹುದಿತ್ತು': ರಾಜನಾಥ್ ಸಿಂಗ್

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

Shocking: ಸಫಾರಿ ತರಬೇತುದಾರನ ಮೇಲೆ ಕರಡಿ ಭೀಕರ ದಾಳಿ, ಬೆಚ್ಚಿಬಿದ್ದ ಪ್ರವಾಸಿಗರು!

KSCA ಚುನಾವಣೆ: 191 ಮತಗಳ ಅಂತರಿಂದ ಗೆದ್ದ ವೆಂಕಟೇಶ್ ಪ್ರಸಾದ್, ನೂತನ ಅಧ್ಯಕ್ಷರಾಗಿ ಆಯ್ಕೆ

News headlines 07-12-2025 | ಚಳಿಗಾಲದ ವಿಧಾನಮಂಡಲ ಅಧಿವೇಶನ; 21 ವಿಧೇಯಕ ಮಂಡನೆ ಸಾಧ್ಯತೆ; ಮೆಕ್ಕೆಜೋಳ ರೈತರಿಗೆ ಗುಡ್ ನ್ಯೂಸ್; ನಿಷೇಧಿತ ವಸ್ತು ಪೂರೈಕೆಗೆ ಯತ್ನ; ಜೈಲಿನ ವಾರ್ಡನ್ ಬಂಧನ

SCROLL FOR NEXT