ಪ್ರವೀಣ್ ನೆಟ್ಟಾರು 
ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧಿಸಿದ NIA

ಪಿಎಫ್‌ಐ ನಾಯಕರ ಮಾರ್ಗದರ್ಶನದಲ್ಲಿ ಅತೀಕ್, ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ.

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಮುಖ ಆರೋಪಿ ಅತೀಕ್ ಅಹ್ಮದ್‌ನನ್ನು ಬಂಧಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅತೀಖ್ ಅಹ್ಮದ್ ಎಂಬಾತನನ್ನು ಬಂಧಿಸಿದೆ.

ಈ ಪ್ರಕರಣದಲ್ಲಿ ಬಂಧನವಾಗಿರುವವರಲ್ಲಿ ಈತ 21ನೇ ಆರೋಪಿ. ಈತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯನೆಂದು ಹೇಳಲಾಗಿದೆ. 2022ರ ಜುಲೈನಲ್ಲಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಪಿಎಫ್ಐ ಸಂಘಟನೆಯ ಸದಸ್ಯರ ಕುಕೃತ್ಯ ಎಂಬುದು ತಿಳಿದುಬಂದಿದ್ದರಿಂದ ಆಗ ರಾಜ್ಯ ಸರ್ಕಾರ, ಇದನ್ನು ಎನ್ಐಗೆ ವಹಿಸಿತ್ತು. ಆಗಿನಿಂದಲೂ ತನಿಖೆ ನಡೆಸುತ್ತಿರುವ ಎನ್ಐಎ ಇದುವರೆಗೆ 21 ಮಂದಿಯನ್ನು (ಜ. 21ರ ಅತೀಕ್ ಅಹ್ಮದ್ ಬಂಧನವೂ ಸೇರಿ) ಬಂಧಿಸಲಾಗಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಎನ್ಐಎ ಅಧಿಕಾರಿಗಳು ಬಲೆ ಬೀಸಿದ್ದಾರೆ. ಅವರನ್ನು ಹಿಡಿದುಕೊಟ್ಟವರಿಗೆ ಬಹುಮಾನವನ್ನು ನೀಡುವುದಾಗಿಯೂ ಘೋಷಿಸಲಾಗಿದೆ.

ಪಿಎಫ್‌ಐ ನಾಯಕರ ಮಾರ್ಗದರ್ಶನದಲ್ಲಿ ಅತೀಕ್, ಪ್ರಕರಣದ ಪ್ರಮುಖ ಸಂಚುಕೋರ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಜನರಲ್ಲಿ ಭಯ ಮತ್ತು ಕೋಮು ಅಶಾಂತಿಯನ್ನು ಹುಟ್ಟುಹಾಕಲು ಪಿಎಫ್‌ಐ ಕಾರ್ಯಸೂಚಿಯ ಭಾಗವಾಗಿ ಕೊಲೆಯನ್ನು ಯೋಜಿಸಿ ಕಾರ್ಯಗತಗೊಳಿಸಿದ್ದರು" ಎಂದು ಎನ್‌ಐಎ ಹೇಳಿದೆ.

ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಪ್ರಕಾರ, ಕೊಲೆಯ ನಂತರ ಮುಸ್ತಫಾ ಪರಾರಿಯಾಗಿದ್ದ ಮತ್ತು ಆತನನ್ನು ಚೆನ್ನೈಗೆ ಸಾಗಿಸುವುದು ಸೇರಿದಂತೆ ಆತನ ಪ್ರಯಾಣಕ್ಕೆ ಅತೀಕ್ ಅನುಕೂಲ ಮಾಡಿಕೊಟ್ಟಿದ್ದ. ಮೇ 2024 ರಲ್ಲಿ ಮುಸ್ತಫಾ ಬಂಧನವಾಗುವವರೆಗೂ ಅವರು ಕಾನೂನಿನ ಕೈಯ್ಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದರು.

ಆಗಸ್ಟ್ 2022 ರಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡಿದ್ದ NIA, 'PFI ಸೇವಾ ತಂಡಗಳು' ಎಂದು ಕರೆಯಲ್ಪಡುವ ರಹಸ್ಯ ತಂಡಗಳನ್ನು ರಚಿಸಿಕೊಂಡು ನೆಟ್ಟಾರು ಅವರನ್ನು ಹತ್ಯೆ ಮಾಡಲು ಶಸ್ತ್ರಾಸ್ತ್ರ ಮತ್ತು ಕಣ್ಗಾವಲು ತರಬೇತಿ ಪಡೆದಿದೆ ಎಂದು ತನಿಖೆಯ ಸಮಯದಲ್ಲಿ ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT