ಕ್ರೂಸರ್ ವಾಹನ ಪಲ್ಟಿ 
ರಾಜ್ಯ

ರಾಯಚೂರಿನಲ್ಲಿ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು, 10 ಮಂದಿಗೆ ಗಾಯ

ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.

ರಾಯಚೂರು: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಬುಧವಾರ ನಡೆದಿದೆ.

ಮೃತರನ್ನು ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಆರ್ಯವಂದನ್ (18), ಸುಚೇಂದ್ರ (22) ಮತ್ತು ಅಭಿಲಾಷ್ (20) ಎಂದು ಗುರ್ತಿಸಲಾಗಿದೆ. ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಂಧನೂರು ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT