ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 
ರಾಜ್ಯ

Aero India 2025: ಯಲಹಂಕ ಸುತ್ತಮುತ್ತ ಮಾಂಸ ಮಾರಾಟಕ್ಕೆ ನಿಷೇಧವಿಲ್ಲ!

ಫೆಬ್ರವರಿ 10 ರಿಂದ 14 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಗಳ ದಾಳಿಗಳನ್ನು ತಡೆಗಟ್ಟಲು ಸುತ್ತಮುತ್ತಲಿನ ಪ್ರದೇಶಗಳಲ್ಲ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿತ್ತು.

ಬೆಂಗಳೂರು: ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾಹೆ ಉದ್ಯಾನನಗರಿ ಸಜ್ಜಾಗಿದ್ದು, ಈ ನಡುವಲ್ಲೇ ಮಾಂಸ ಮಾರಾಟಕ್ಕೆ ಹೇರಲಾಗಿದ್ದ ನಿಷೇಧವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಿಂಪಡೆದಿದೆ.

ಹೋಟೆಲ್ ಮಾಲೀಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶವನ್ನು ಹಿಂಪಡೆದಿದ್ದಾರೆಂದು ಬೆಂಗಳೂರು ಹೊಟೇಲ್ ಅಸೋಸಿಯೇಷನ್ ​​ತಿಳಿಸಿದೆ. ಆದರೆಸ, ಬಿಬಿಎಂಪಿ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಹೋಟೆಲ್ ಮಾಲೀಕರ ಮನವಿ ಪರಿಗಣನೆಯಲ್ಲಿದೆ. ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಯಾವುದೇ ಅಧಿಕೃತ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪಾಲಿಕೆ ಮೂಲಗಳು ತಿಳಿಸಿವೆ.

ಫೆಬ್ರವರಿ 10 ರಿಂದ 14 ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಕ್ಷಿಗಳ ದಾಳಿಗಳನ್ನು ತಡೆಗಟ್ಟಲು ಸುತ್ತಮುತ್ತಲಿನ ಪ್ರದೇಶಗಳಲ್ಲ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿತ್ತು.

ಯಲಹಂಕ ಏರ್ ಪೋರ್ಸ್ ಸ್ಟೇಷನ್‌ನಲ್ಲಿ ದಿನಾಂಕ10.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಏರ್‌ಶೋ ನಡೆಯುವುದರಿಂದ ಏರ್ ಶೋ ಸುಗಮವಾಗಿ ನಡೆಸಲು ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನಿಂದ 13 ಕಿ. ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ, ನಿಯಮ ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿತ್ತು.

ಆದರೆ, ಬಿಬಿಎಂಪಿಯ ಈ ಆದೇಶದ ವಿರುದ್ಧ ಹೋಟೆಲ್ ಮಾಲೀಕರು ತೀವ್ರ ಆಕ್ಷೇಪ ಎತ್ತಿದ್ದಾರೆ. ಏರೋ ಇಂಡಿಯಾ ವೇಳೆ ಮಾಂಸಾಹಾರ ನಿಷೇಧ ನಿರ್ಧಾರ ಸಮಂಜಸವಲ್ಲ. ಫೆಬ್ರವರಿ 10 ರಿಂದ 14ರವರೆಗೆ ಏರ್‌ಶೋ 2025 ಪ್ರದರ್ಶನ ನಡೆಯಲಿದ್ದು, ಜನವರಿ 23 ರಿಂದ ಫೆಬ್ರವರಿ 17ರವರೆಗೆ ಒಟ್ಟು 26 ದಿನಗಳ ಕಾಲ ಮಾಂಸಹಾರ ಸ್ಥಗಿತಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿರುವುದು ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಹೇಳಿದೆ.

ಈ ಪ್ರದೇಶದಲ್ಲಿ ಸುಮಾರು 5000ಕ್ಕಿಂತಲೂ ಹೆಚ್ಚು ಸ್ಟಾರ್ ಹೊಟೇಲ್‌ಗಳು, ಪಬ್, ಬಾರ್ & ರೆಸ್ಟೋರೆಂಟ್‌ಗಳು, ಮಧ್ಯಮವರ್ಗ ಹಾಗೂ ಜನಸಾಮಾನ್ಯರಿಗೆ ಅಗತ್ಯವಾಗಿರುವ ಬಿರಿಯಾನಿ, ಮನೆ ಹೊಟೇಲುಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವುಗಳ ವ್ಯಾಪಾರ ಸಂಪೂರ್ಣ ಸ್ಥಗಿತಗೊಳಿಸಿದರೆ ಹೆಚ್ಚಿನ ತೊಂದರೆಯುಂಟಾಗಲಿದೆ ಎಂದು ಸಂಘ ತಿಳಿಸಿದೆ.

ಈ ಕುರಿತು ಬಿಬಿಎಂಪಿ ಬಳಿ ಮನವಿ ಸಲ್ಲಿಸಲಾಗಿದ್ದು, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶವನ್ನು ಹಿಂಪಡೆದಿದ್ದಾರೆಂದು ಬೆಂಗಳೂರು ಹೊಟೇಲ್ ಅಸೋಸಿಯೇಷನ್ ​​ಅಧ್ಯಕ್ಷ ಪಿ.ಸಿ.ರಾವ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT