ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳ: ಜನವರಿ 25ರಂದು ಅಧಿಕಾರಿಗಳ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 25 ರಂದು ಅಧಿಕಾರಿಗಳ ಸಭೆ ಕರೆದಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶನಿವಾರ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು, ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ ಚಿರಂಜೀವಿ ಅವರು ಸೂಚಿಸಿದ್ದಾರೆ.

ಹಾವೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿದೆ. ಕಾಟ ತಾಳಲಾರದೆ ಜನ ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಣಿ ಆತ್ಮಹತ್ಯೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಿದ್ದು, ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಇಂದಿರಾ, ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್!

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭ

SCROLL FOR NEXT