ಇಂಧನ ಸಚಿವ ಕೆಜೆ ಜಾರ್ಜ್ 
ರಾಜ್ಯ

ರಾಜ್ಯದ ಹೊಲಗದ್ದೆಗಳಲ್ಲಿರುವ ಎಲ್ಲ ರೈತರ ಮನೆಗಳಿಗೆ ನಿರಂತರ ವಿದ್ಯುತ್: ಸಚಿವ ಕೆಜೆ ಜಾರ್ಜ್‌

ಸದ್ಯ ಫಾರ್ಮ್‌ಹೌಸ್‌ಗಳಿಗೆ ಏಳು ಗಂಟೆಗಳ 3-ಫೇಸ್ ವಿದ್ಯುತ್ ಸಿಗುತ್ತಿದೆ. ದಿನದ ಉಳಿದ ಅವಧಿಯಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದರು.

ಬಾಗಲಕೋಟೆ: ರಾಜ್ಯದ ಹೊಲಗದ್ದೆಗಳಲ್ಲಿನ ರೈತರ ಮನೆಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಬುಧವಾರ ಹೇಳಿದರು.

ಬಾಗಲಕೋಟೆಯ ನೂತನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 'ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಪ್ರವಾಹ ಪೀಡಿತ ಕುಟುಂಬಗಳು ತಮ್ಮ ಹೊಲಗಳಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಗಳಿಗೆ ನಿರಂತರ ವಿದ್ಯುತ್ ನೀಡುವುದು ಅಗತ್ಯವಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವುದು ಮತ್ತು ಅಗತ್ಯ ಕ್ರಮಕೈಗೊಳ್ಳಲಾಗುವುದು' ಎಂದು ಹೇಳಿದರು.

ಸದ್ಯ ಫಾರ್ಮ್‌ಹೌಸ್‌ಗಳಿಗೆ ಏಳು ಗಂಟೆಗಳ 3-ಫೇಸ್ ವಿದ್ಯುತ್ ಸಿಗುತ್ತಿದೆ. ದಿನದ ಉಳಿದ ಅವಧಿಯಲ್ಲಿ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಕಳೆದ ವರ್ಷದ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆ ಎದುರಾಗಿತ್ತು. ಆದರೆ, ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್‌ ಹಾಗೂ ಉತ್ತರ ಪ್ರದೇಶಗಳ ಜತೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ದವಾಗಿದೆ ಎಂದರು.

ಸಭೆಯಲ್ಲಿದ್ದ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು, ತಮ್ಮ ಕ್ಷೇತ್ರದಲ್ಲಿ 220 ಕೆವಿ ಸಬ್ ಸ್ಟೇಷನ್ ಸ್ಥಾಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

'ಹುನಗುಂದ ಮತಕ್ಷೇತ್ರದ ಮರೋಳ್-ರಾಮತಾಳ ಹಾಗೂ ನಂದವಾಡಗಿ ಏತ ನೀರಾವರಿ ಯೋಜನೆಯಿಂದಾಗಿ 220 ಕೆವಿ ಸಬ್ ಸ್ಟೇಷನ್ ಅವಶ್ಯವಿದ್ದು, ಮಂಜೂರಾತಿ ದೊರೆತಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಳಕಲ್ ಪಟ್ಟಣದಲ್ಲಿ 6 ಎಕರೆ ಜಾಗದಲ್ಲಿ ನಿರ್ಮಿಸುತ್ತಿರುವ ಅತ್ಯಾಧುನಿಕ ಕ್ರೀಡಾ ಮೈದಾನದ ಮೇಲಿನ ಹೈವೋಲ್ಟೇಜ್ ಲೈನ್ ಕ್ರಾಸಿಂಗ್ ತೆಗೆಸಲು ಅಗತ್ಯ ಕ್ರಮಕೈಗೊಳ್ಳಬೇಕು' ಎಂದು ಕಾಶಪ್ಪನವರ್ ಹೇಳಿದರು.

ಸಂಸದ ಪಿಸಿ ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸ್ವಾಮಿ ಭಾಂಡಗೆ ಹಾಗೂ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!