ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ 
ರಾಜ್ಯ

ನೆಹರೂ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್‌ ವಿರುದ್ಧ ಪ್ರಕರಣ ದಾಖಲು

ನೆಹರೂ ಸರ್ವಾಧಿಕಾರಿ ಆಗಬೇಕೆಂದು ಮಹಾತ್ಮ ಗಾಂಧಿಯವರನ್ನು ಕೊಲ್ಲಿಸಿದರು ಎಂದು ಹೇಳಿರುವ ಯತ್ನಾಳ್ ಅವರ ಆಧಾರಹಿತ ಹೇಳಿಕೆ ದೇಶದ ಹಾಗೂ ರಾಜ್ಯದ ಜನರಲ್ಲಿ ತಪ್ಪು ಕಲ್ಪನೆ ಉಂಟಾಗುತ್ತಿದೆ.

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಾಜಿ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಯತ್ನಾಳ್ ಮಾತನಾಡಿದ್ದಾರೆ.

ಮಹಾತ್ಮ ಗಾಂಧಿಯವರ ಹತ್ಯೆಗೆ ಮಾಜಿ ಪ್ರಧಾನಿ ನೆಹರೂ ಕಾರಣ ಎಂದು ಅಪಪ್ರಚಾರದ ಮತ್ತು ಸುಳ್ಳು ಹೇಳಿಕೆ ನೀಡಿ ನೆಹರು ಅವರ ವ್ಯಕ್ತಿತ್ವಕ್ಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡಿದ್ದಾರೆ. ಪ್ರತೀ ಬಾರಿಯೂ ಅವರು ರಾಜ್ಯದ ಜನತೆಗೆ ತಪ್ಪು ಸಂದೇಶಗಳನ್ನು ರವಾನಿಸಿ ಸುಳ್ಳು ಪ್ರಚಾರ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸುತ್ತಿದ್ದಾರೆ.

ಇತ್ತೀಚೆಗೆ ಮಹಾತ್ಮ ಗಾಂಧಿಯವರನ್ನು ಕೊಂದಿದ್ದು ಗೋಡ್ಸೆ ಎಂಬ ವಿಷಯದ ಕುರಿತು ಹೇಳಿಕೆ ನೀಡಿರುವ ಯತ್ನಾಳ್, ಗಾಂಧಿಯ ದೇಹದಲ್ಲಿ ಒಂದು ಗುಂಡು ಗೋಡ್ಸೆ ಹೊಡೆದಿದ್ದು ಎಂದು ಸಾಬೀತಾಗಿದೆ. ಇನ್ನೆರಡು ಗೋಲಿಯನ್ನು (ಗುಂಡುಗಳನ್ನು) ನೆಹರೂ ಹೊಡೆಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯ ಎಂದು ಕಾಂಗ್ರೆಸ್‌ ದೂರಿದೆ.

ನೆಹರೂ ಸರ್ವಾಧಿಕಾರಿ ಆಗಬೇಕೆಂದು ಮಹಾತ್ಮ ಗಾಂಧಿಯವರನ್ನು ಕೊಲ್ಲಿಸಿದರು ಎಂದು ಹೇಳಿರುವ ಯತ್ನಾಳ್ ಅವರ ಆಧಾರಹಿತ ಹೇಳಿಕೆ ದೇಶದ ಹಾಗೂ ರಾಜ್ಯದ ಜನರಲ್ಲಿ ತಪ್ಪು ಕಲ್ಪನೆ ಉಂಟಾಗುತ್ತಿದೆ. ಆದ್ದರಿಂದ ದೇಶಕ್ಕಾಗಿ ಹೋರಾಡಿ ಜೈಲುವಾಸ ಅನುಭವಿಸಿದ್ದ ಮಾಜಿ ಪ್ರಧಾನಿ ನೆಹರೂ ಬಗ್ಗೆ ಅಪಪ್ರಚಾರ ಮಾಡಿರುವ ಹಾಗೂ ಮಹಾತ್ಮ ಗಾಂಧಿಯವರ ಸಾವಿನ ಬಗ್ಗೆ ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT