ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ 
ರಾಜ್ಯ

ಮಂಗಳೂರು ಮಸಾಜ್ ಪಾರ್ಲರ್‌ ಮೇಲೆ ದಾಳಿ; ರಾಮಸೇನೆ ಮುಖ್ಯಸ್ಥ ಅತ್ತಾವರ ಸೇರಿ 14 ಮಂದಿ ಬಂಧನ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿಸಿದ್ದು, ಬಳಿಕ ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಹಾಗೂ 13 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮಂಗಳೂರು: ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ಮಸಾಜ್ ಪಾರ್ಲರ್ ಮೇಲೆ ಗುರುವಾರ ನಡೆದ ದಾಳಿಗೆ ಸಂಬಂಧಿಸಿದಂತೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.

ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇಂದು ಮಧ್ಯಾಹ್ನ ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ದಾಳಿ ನಡೆಸಿದ್ದರು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿಸಿದ್ದು, ಬಳಿಕ ರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಹಾಗೂ 13 ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

BNS ಕಾಯ್ದೆ 329(2), 324(5), 74, 351(3), 115(2), 109, 352, 190 ಅಡಿ ಪ್ರಕರಣ ದಾಖಲಾಗಿದ್ದು, ಒಟ್ಟು 14 ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹರ್ಷ ರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇಶ, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್ ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ, ಪ್ರಸಾದ್ ಅತ್ತಾವರ ಬಂಧಿತ ಆರೋಪಿಗಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

VB-G RAM ಮಸೂದೆ: ಸಂಸತ್ತಿನ ಸಂಕೀರ್ಣದಲ್ಲಿ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ, ಬೀದಿಗಿಳಿದು ಹೋರಾಟ ನಡೆಸುವುದಾಗಿ ಪ್ರತಿಜ್ಞೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿ

SCROLL FOR NEXT