ಭರತ್ ಶೆಟ್ಟಿ 
ರಾಜ್ಯ

ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ

ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ, ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ನೈಜ ಆರೋಪಿಗಳನ್ನು ಬಯಲಿಗೆ ತನ್ನಿ. ದರೋಡೆಕೊರರಿಗೆ ರಾಜಕೀಯ ಬೆಂಬಲ ಇದೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಭರತ್ ಶೆಟ್ಟಿ ದೂರಿದ್ದಾರೆ.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಮೂವರ ಬಂಧನ ಈಗಾಗಲೇ ಆಗಿದೆ. ಮುಂಬೈನ ಕಣ್ಣನ್ ಮಣಿ ಗುಂಡೇಟು ತಿಂದು ಪೊಲೀಸರ ವಶದಲ್ಲಿದ್ದರೆ, ಕಿಂಗ್​ಪಿನ್ ತುಮಿಳುನಾಡಿನ ಮುರುಗನ್ ಡಿ ದೇವರ್, ಸಹಚರ ರಾಜೇಂದ್ರನ್​ನನ್ನ ನಿನ್ನೆ ಮಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT